Advertisement

Mysuru: ರಾಮೋಜಿ ಫಿಲಂ ಸಿಟಿ ಮಾದರಿ ಮೈಸೂರು ಚಿತ್ರನಗರಿ ನಿರ್ಮಾಣ

01:19 AM Oct 01, 2024 | Team Udayavani |

ಬೆಂಗಳೂರು: ಮೈಸೂರು ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಗುರುತಿಸ ಲಾಗಿರುವ 110 ಎಕ್ರೆ ಕೆಐಎಡಿಬಿ ಭೂಮಿಯನ್ನು ಚಿತ್ರನಗರಿ ನಿರ್ಮಾಣಕ್ಕೆ ಆದಷ್ಟು ಬೇಗನೆ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸೂಚಿಸಲಾಗಿದೆ.

Advertisement

ಹೈದರಾಬಾದ್‌ನಲ್ಲಿರುವ ರಾಮೋಜಿ ಫಿಲಂ ಸಿಟಿ ಮಾದರಿಯಲ್ಲಿ 3 ವರ್ಷಗಳ ಒಳಗೆ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ 3 ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸುವಂತೆ ಸಿಎಂ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next