ರಾಮನಗರ: ಜಿಲ್ಲಾದ್ಯಂತ ಬುಧವಾರ ಮುಸ್ಲಿಂ ಸಮುದಾಯದವರು ಶ್ರದ್ಧೆ, ಭಕ್ತಿ, ಸಡಗರದಿಂದ ರಂಜಾನ್ ಹಬ್ಬವನ್ನು ಆಚರಿಸಿದರು.
ನಮಾಜ್: ರೇಷ್ಮೆ ನಗರಿ ರಾಮನಗರದಲ್ಲಿ ಬುಧವಾರ ಬೆಳಗ್ಗೆ ನಗರದ ಮಿನಿ ವಿಧಾನಸೌಧದ ಎದುರಿನಲ್ಲಿರುವ ಈದ್ಗಾ ಮೈದಾನಕ್ಕೆ ತಂಡೋಪತಂಡವಾಗಿ ಆಗಮಿಸಿದ ಸಾವಿರಾರು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಚಾರ ಬದಲಾಗಿತ್ತು:ಎಂದಿನಂತೆ ಈದ್ಗಾ ಮೈದಾ ನದಲ್ಲಿ ಸ್ಥಳಾವಕಾಶದ ಕೊರತೆ ಎದುರಾದ ಕಾರಣ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆಯಲ್ಲಿಯೂ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಸ್ಥಳೀಯ ಆಡಳಿತ ಅವಕಾಶ ಮಾಡಿಕೊಟ್ಟಿತ್ತು. ಹೆದ್ದಾರಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿತ್ತು.
ಉಪವಾಸಕ್ಕೆ ಪ್ರಾಮುಖ್ಯತೆ: ಎಲ್ಲಾ ಧರ್ಮದಲ್ಲಿಯೂ ಉಪವಾಸಕ್ಕೆ ಪ್ರಾಮುಖ್ಯತೆ ಇದೆ. ದೇಹಾರೋಗ್ಯ ಉತ್ತಮ ಪಡಿಸಿಕೊಳ್ಳಲು ಹಾಗೂ ಸರಳ ಜೀÊನಕ್ಕೆ ಉಪವಾಸ ಪ್ರೋತ್ಸಾಹ ನೀಡುತ್ತದೆ. ರಂಜಾನ್ ಮಾಸದಲ್ಲಿ ಬಹುತೇಕ ಮುಸ್ಲಿಮರು ಬಡವ ಬಲ್ಲಿದ ಎನ್ನದೆ ಉಪವಾಸ ಆಚರಿಸುತ್ತಾರೆ. ತಿಂಗಳ ಕಾಲ ಶ್ರದ್ಧಾ ಭಕ್ತಿಯ ಉಪವಾಸ ನಡೆಸಿದ ನಂತರ ಮುಸಲ್ಮಾನರು ರಂಜಾನ್ ಹಬ್ಬದಂದು ಉಪವಾಸ ಅಂತ್ಯಗೊಳಿಸಿದರು.
Advertisement
ಮನುಷ್ಯನ ಮನಸ್ಸಿನಲ್ಲಿ ಹುದುಗಿರುವ ದ್ವೇಷ ಭಾವನೆ ಕಡಿಮೆ ಮಾಡಿ, ಪ್ರೀತಿ ಹುಟ್ಟಿಸುವ ಪವಿತ್ರ ರಂಜಾನ್ ಹಬ್ಬವನ್ನು ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳು, ಗ್ರಾಮೀಣ ಭಾಗಗಳಲ್ಲಿಯೂ ಆಚರಿಸಲಾಯಿತು.
Related Articles
Advertisement
ಈದ್ಗಾ ಮೈದಾನಕ್ಕೆ ಆಗಮಿಸಿದ್ದ ಮುಸ್ಲಿಮರು ಹೊಸ ಉಡುಗೆ ತೊಟ್ಟು, ಪರಸ್ಪರ ಆಲಂಗಿಸಿ ಶುಭಾಶಯ ವಿನಿಮಯ ಮಾಡಿಕೊಂಡರು. ಹಿರಿಯರೊಟ್ಟಿಗೆ ಆಗಮಿಸಿದ್ದ ಚಿಣ್ಣರೂ ಹಿರಿಯರನ್ನು ಅನುಕರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಜಿಯಾವುಲ್ಲಾ ಸೇರಿದಂತೆ ಗಣ್ಯರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ದವಸದ ಕಿಟ್ ವಿತರಣೆ: ಕೆಲವು ರಾಜಕೀಯ ಪಕ್ಷಗಳ ಮುಖಂಡರು ಪ್ರಾರ್ಥನಾ ಸ್ಥಳಕ್ಕೆ ಆಗಮಿಸಿ ಮುಸಲ್ಮಾನ ಬಂಧುಗಳಿಗೆ ಹಬ್ಬದ ಶುಭಾಶಯ ಕೋರಿದರು. ರಂಜಾನ್ ಪ್ರಯುಕ್ತ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಮಿಟಿ ವತಿಯಿಂದ ಮುಸ್ಲಿಮರಿಗೆ ದವಸ ಧಾನ್ಯದ ಕಿಟ್ ವಿತರಿಸಲಾಯಿತು.ರಂಜಾನ್ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯುದಂತೆ ಪೊಲೀಸರು ವಿಶೇಷ ಬಂದೋಬಸ್ತ್ ಕೈಗೊಂಡಿದ್ದರು. ಸಸಿ ವಿತರ ಣೆಯಲ್ಲಿ ಜೆಡಿಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಜೆಡಿ ಎಸ್ ಯುವ ಘಟ ಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಜಯ ಕುಮಾರ್, ಜಿಲ್ಲಾ ಜೆಡಿಎಸ್ ಸೇವಾದಳ ವಿಭಾಗದ ಯೋಗೇಶ್ ಕುಮಾರ್, ಜಿಲ್ಲಾ ಆರ್‌ಟಿಐ ಕಾರ್ಯ ಕರ್ತರ ರಕ್ಷಣಾ ವೇದಿಕೆ ಉಪಾಧ್ಯಕ್ಷ ಅಸ್ಲಂ ಪಾಷಾ, ಬಳಗದ ಸಿ.ಎಸ್.ರಾಜು, ರವಿ ಮತ್ತಿತರರಿದ್ದರು.
ಕುಮಾರಣ್ಣ ಅಭಿಮಾನಿ ಬಳಗದಿಂದ ಸಸಿ ವಿತರಣೆ:
ರಂಜಾನ್ ಹಾಗೂ ವಿಶ್ವ ಪರಿಸರ ದಿನದ ಪ್ರಯುಕ್ತ ಕುಮಾರಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು ಮುಸ್ಲಿಮರಿಗೆ ಸಸಿ ವಿತರಿಸುವುದರ ಮೂಲಕ ಗಮನ ಸೆಳೆದರು. ಸಿಹಿ ಹಂಚಿ ರಂಜಾನ್ ಹಬ್ಬದ ಶುಭಾಶಯ ಕೋರಿದ ಕುಮಾರಣ್ಣ ಅಭಿಮಾನಿಗಳು ಪರಿಸರ ಕಾಳಜಿ ಬಗ್ಗೆಯೂ ಜಾಗೃತಿ ಮೂಡಿಸಿದ್ದು ಇದೇ ಪ್ರಥಮ. ಹಬ್ಬದ ಸಂಭ್ರಮದಲ್ಲಿದ್ದ ಮುಸ್ಲಿಮರು ಸಸಿಗಳನ್ನು ಪ್ರೀತಿಯಿಂದಲೇ ಸ್ವೀಕರಿಸಿದರು.