Advertisement

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ರಣಹದ್ದು! ‌

12:08 PM May 12, 2024 | Team Udayavani |

ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನ ಕುಮಾರ್‌(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್‌ “ರಣಹದ್ದು’ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.

Advertisement

ಇವರೇ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನ ಕುಮಾರ್‌ ಅವರ ಮಕ್ಕಳಾದ ಶಶಾಂಕ್‌ ಹಾಗೂ ಸೂರಜ್‌ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಒಬ್ಬ ಮಗ ನಾಯಕನಾಗಿ, ಮತ್ತೂಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಹಾಡುಗಳು ಹಾಗು ಟೀಸರ್‌ ಬಿಡುಗಡೆಯಾಯಿತು.

ನಿರ್ಮಾಪಕ, ನಿರ್ದೇಶಕ ಪ್ರಸನ್ನ ಕುಮಾರ್‌ ಮಾತನಾಡಿ, ಕಳೆದ ನಲವತ್ತು ವರ್ಷಗಳಿಂದ ಕನ್ನಡ ಚಿತ್ರರಂಗ ನನಗೆ ಅನ್ನ ಹಾಕುತ್ತಿದೆ. ಅದಕ್ಕೆ ನಾನು ಹಾಗೂ ನನ್ನ ಕುಟುಂಬ ಚಿರಋಣಿ. ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ನನ್ನ ಕಾಲಿಗೆ ತೀವ್ರ ಪೆಟ್ಟಾಗಿತ್ತು. ಆ ಸಮಯದಲ್ಲಿ ತುಂಬಾ ಯೋಚನೆ ಮಾಡುತ್ತಿದೆ. ಸ್ವಲ್ಪ ದಿನಗಳ ನಂತರ ಚಿತ್ರವೊಂದನ್ನು ನಿರ್ಮಾಣದ ಜೊತೆಗೆ ನಿರ್ದೇಶನ ಕೂಡ ಮಾಡಬೇಕೆಂದು ಆಸೆಯಾಯಿತು. ಆ ಆಸೆಯನ್ನು ಮಕ್ಕಳ ಬಳಿ ಹೇಳಿಕೊಂಡೆ. ನನ್ನ ಆಸೆಗೆ ಮಕ್ಕಳು ಆಸರೆಯಾದರು. ಈ ಚಿತ್ರದಲ್ಲಿ ನಟಿಸುವ ಮೂಲಕ ನನ್ನ ಇಬ್ಬರು ಮಕ್ಕಳು ಚಿತ್ರರಂಗ ಪ್ರವೇಶಿಸಿದ್ದಾರೆ. ಅನೇಕ ಜನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಣವಿಲ್ಲದ ಮನುಷ್ಯನನ್ನು ಸಮಾಜ ಹೇಗೆ ನೋಡುತ್ತದೆ ಎಂಬುದೇ ಚಿತ್ರದ ಕಥಾ ಸಾರಾಂಶ. ಅಷ್ಟೇ ಅಲ್ಲದೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಚಿತ್ರೀಕರಣ ಮುಕ್ತಾಯವಾಗಿ ಬಿಡುಗಡೆ ಹಂತದಲ್ಲಿದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next