Advertisement

ಶಾಂತಿ-ಸೌಹಾರ್ದ ಕಾಪಾಡಿ: ರಣದೀಪ್‌ಸಿಂಗ್‌ ಸುರ್ಜೇವಾಲಾ ಮನವಿ

09:00 PM Feb 09, 2022 | Team Udayavani |

ಬೆಂಗಳೂರು: ಹಿಜಾಬ್‌ – ಕೇಸರಿ ಶಾಲು ಸಂಘರ್ಷ ತಿಳಿಯಾಗಬೇಕಿದ್ದರೆ ವಿದ್ಯಾರ್ಥಿಗಳಲ್ಲಿ ಶಾಂತಿ, ಸೌಹಾರ್ದ ಮೂಡಬೇಕು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

Advertisement

ಈ ಕುರಿತು ರಾಜ್ಯದ ವಿದ್ಯಾರ್ಥಿಗಳಿಗೆ ಬಹಿರಂಗ ಪತ್ರ ಬರೆದಿರುವ ಅವರು, ಕೆಲವು ದುಷ್ಟರ ಸ್ವಹಿತಾಸಕ್ತಿಗಾಗಿ ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಮಕ್ಕಳು ಹಾಗೂ ಅವರ ಪೋಷಕರಿಗೆ ಮನವಿ ಮಾಡಿದ್ದಾರೆ.

ವಿವಿಧತೆಯಲ್ಲಿ ಏಕತೆ ಎಂಬ ತತ್ವವನ್ನು ಎತ್ತಿ ಹಿಡಿದು ನಾವೆಲ್ಲರೂ ಒಂದಾಗಿ ಶಿಕ್ಷಣದ ಬಗ್ಗೆ ಗಮನಹರಿಸಿ ರಾಜ್ಯ ಹಾಗೂ ದೇಶವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸೋಣ.

ನಾನು ನಿಮ್ಮ ಹಿತೈಷಿಯಾಗಿ, ಮಾಜಿ ವಿದ್ಯಾರ್ಥಿ ಹೋರಾಟಗಾರನಾಗಿ, ಭಾರತದ ಪ್ರಾಚೀನ ವಿಶ್ವವಿದ್ಯಾನಿಲಯ ವಾಗಿರುವ ಪಂಜಾಬ್‌ ವಿವಿಯ ಸೆನೆಟ್‌ ಹಾಗೂ ಸಿಂಡಿಕೇಟ್‌ ಸದಸ್ಯನಾಗಿ, ಆಡಳಿತಗಾರನಾಗಿ ನನಗಿರುವ ಸುದೀರ್ಘ‌ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ಸಿಗದ ತುರ್ತು ಆರೋಗ್ಯ ವಾಹನ ; ಉಸಿರಾಟದ ಸಮಸ್ಯೆಯಿಂದ 45 ದಿನದ ಮಗು ಸಾವು

Advertisement

ಬೆಂಗಳೂರು ಭಾರತದ ಮಾಹಿತಿ ತಂತ್ರಜ್ಞಾನದ ರಾಜಧಾನಿ.ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಇತರೆ ವೃತ್ತಿಪರ ಕಾಲೇಜುಗಳನ್ನು ಹೊಂದಿರುವ ಕರ್ನಾಟಕ ರಾಜ್ಯವು ಭಾರತದ ಶೈಕ್ಷಣಿಕ ಕೇಂದ್ರ ಸ್ಥಾನವಾಗಿದೆ. ಯುವಕರಿಗೆ ಹೆಚ್ಚು ಉದ್ಯೋಗ ಸೃಷ್ಟಿಸುವ ಅವಕಾಶ ಹೊಂದಿದೆ ಎಂದು ಹೇಳಿದ್ದಾರೆ.

ಬಹು ಭಾಷಾ, ಬಹು ಜನಾಂಗ, ಬಹು ಸಂಸ್ಕೃತಿಯ ಗುರುತು ಹೊಂದಿರುವ ಬೆಂಗಳೂರು ಹಾಗೂ ಕರ್ನಾಟಕ ನಮ್ಮ ದೇಶದ ಅಭಿವೃದ್ಧಿಗೆ ಮಾರ್ಗಸೂಚಿಯಾಗಿದೆ.

ಭ್ರಷ್ಟಾಚಾರ, ದುರಾಡಳಿತದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರವು ತನ್ನ ರಾಜಕೀಯ ದುರುದ್ದೇಶಕ್ಕೆ ಕರ್ನಾಟಕ ರಾಜ್ಯದ ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ಬಿರುಕು ಮೂಡಿಸಿ ಅವರ ಏಕತೆಯನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next