ಬೆಂಗಳೂರು: ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಬಗ್ಗೆ ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮೀಸಲಾತಿ ಬಗ್ಗೆ ಕಾಂಗ್ರೆಸ್ ಗೆ ಮಾತನಾಡುವ ನೈತಿಕ ಹಾಗೂ ರಾಜಕೀಯ ಅಧಿಕಾರವಿಲ್ಲ ಎಂದರು.
ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9 ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದರು.