Advertisement
ಹಾನಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ, ಬೊಮ್ಮಾಯಿ ಕಾರಣದಿಂದ ಬೆಲೆಯೇರಿಕೆಯಿಂದಾಗಿ ದೇಶದ, ರಾಜ್ಯದ ಯುವಜನತೆ ಇಂದು ತೊಂದರೆ ಅನುಭವಿಸುತ್ತಿದ್ದಾರೆ.ಮೋದಿ, ಮೆಹೆಂಗಾಯಿ ಎರಡೂ ದೇಶಕ್ಕೆ ಹಾನಿಕಾರಕವಾಗಿದೆ ಎಂದು ಆರೋಪಿಸಿದರು.
Related Articles
Advertisement
ಬಿಜೆಪಿಯ ರಾಜ್ಯಾಧ್ಯಕ್ಷರನ್ನು ಅವರ ಪಕ್ಷದಲ್ಲಿ ಯಾರೂ ಮಾತನಾಡಿಸುತ್ತಿಲ್ಲ. ಹೀಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅದಾನಿ ಬಂದರಿನಿಂದ ಬಂದ ಡ್ರಗ್ಸನ್ನು ಅವರು ಪಡೆದಿದ್ದಾರೆ ಎನ್ನಿಸುತ್ತಿದೆ. ಅವರನ್ನು ಮಾನಸಿಕ ಪುನರ್ವಸತಿ ಕೇಂದ್ರಕ್ಕೆ ಸೇರಿಸಬೇಕಿದೆ. ಕೌನ್ಸೆಲಿಂಗ್ ಮಾಡಿಸಬೇಕಾಗಿದೆ ಎಂದು ಕಟೀಲ ವಿರುದ್ದ ಹರಿಹಾಯ್ದರು.
ಕಟೀಲ ಹೇಳಿಕೆಗೆ ಎಚ್.ಕೆ.ಪಾಟೀಲ್ ತಿರುಗೇಟು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಅವರು ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಇದು ಅವರ ಬೌದ್ಧಿಕ ದಿವಾಳಿತನ , ವಿಕೃತ ಮನಸ್ಸನ್ನು ತೋರ್ಪಡಿಸುತ್ತದೆ. ಸಾರ್ವಜನಿಕ ಜೀವನದಲ್ಲಿ ತಮ್ಮ ಮರ್ಯಾದೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಚ್.ಕೆ.ಪಾಟೀಲ್ ತಿರುಗೇಟು ನೀಡಿದರು.
ಬಿಜೆಲಿಗೆ ಸೋಲಿನ ಭಯ ಶುರುವಾಗಿದೆ: ಡಿ.ಕೆ.ಶಿವಕುಮಾರ್ ಬಿಜೆಪಿಗರಿಗೆ ಮತ ಕೇಳಲು ಶಕ್ತಿ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಕಾಂಗ್ರೆಸ್ ಸೈನ್ಯವಿದೆ. ಕಾಂಗ್ರೆಸ್ ಕುಟುಂಬದ ತ್ಯಾಗಕ್ಕೆ ಬಿಜೆಪಿಯವರನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ನಮ್ಮ ಪಕ್ಷ ಬದುಕಿದೆ. ಸತ್ತಿಲ್ಲ. ಎಲೆಕ್ಷನ್ ಆಗಲಿ, ಕೇಸರಿ ಬಗ್ಗೆ ನಮಗೂ ಗೌರವ ಇದೆ. ಈ ಮೆಂಟಲ್ ಬಗ್ಗೆ ನಾವು ಉತ್ತರ ಕೊಡುತ್ತೇವೆ ಎಂದು ಪರೋಕ್ಷವಾಗಿ ಕಟೀಲಿಗೆ ಟಾಂಗ್ ನೀಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜನರ ಬದುಕು ದುರ್ಬರವಾಗಿದೆಯೊ ಇಲ್ಲವೊ? ಆಕ್ರೋಶಗೊಂಡ ಮತದಾರರು ಮತದಾನದ ಮೂಲಕ ಉತ್ತರಿಸಿ ಎನ್ನುವುದು ನಮ್ಮ ಒತ್ತಾಯ ಎಂದರು.
ಸಿಎಂ ಬೊಮ್ಮಾಯಿ ಅವರ ಕ್ಷೇತ್ರವಾದ ಕಾರಣ ಉಪಚುನಾವಣೆಯಲ್ಲಿ ವೈಯಕ್ತಿಕ ಟಾರ್ಗೆಟ್ ಮಾಡಲಾಗುತ್ತದೆ. ಆ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೋಲಿನ ಭಯ ಕಾಡುತ್ತಿರುವುದೇ ಇದಕ್ಕೆಲ್ಲ ಕಾರಣ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಅಂಡಮಾನ್ ಸಂಸದ ಕುಲದೀಪ್ ರಾಯ್ ಶರ್ಮಾ, ರಾಜ್ಯಸಭೆ ಸದಸ್ಯ ಎಲ್ ಹನುಮಂತಯ್ಯ, ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿ, ಅಲ್ಲಂ ವೀರಭದ್ರಪ್ಪ, ಕೆ.ಬಿ. ಕೋಳಿವಾಡ, ಮನೋಹರ್ ತಹಶೀಲ್ದಾರ್, ಎಚ್. ಆಂಜನೇಯ, ಎಂ.ಆರ್. ಸೀತಾರಾಂ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಇದ್ದರು.