ಬೆಂಗಳೂರು: ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ. ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳು. 40% ಕಮಿಷನ್ ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಜತೆ ಪ್ರದೀಪ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ, ಸಂತೋಷ್ ಪಾಟೀಲ್ ಕೂಡ ಬಿಜೆಪಿ ಲೀಡರ್ ಆಗಿದ್ದ ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. ಪ್ರಸಾದ್ ಸಾವಿಗೂ ಹಣಕಾಸಿನ ಸಮಸ್ಯೆಯೇ ಕಾರಣವಾಗಿತ್ತು ಬಿಜೆಪಿ ನಾಯಕರು ಯಾಕೆ ಹಣಕಾಸಿನ ವ್ಯವಹಾರಗಳಲ್ಲಿ ತಲೆ ಹಾಕ್ತಿದ್ದಾರೆ? ಪ್ರದೀಪ್ ಸಾವು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಇವರ ಮಗಳ, ಹೆಂಡತಿಯ ಕಣ್ಣೀರು ಒರೆಸುವುದಕ್ಕೆ ಸರ್ಕಾರದ ಕೈಯಲ್ಲಿ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದರು.
ಭ್ರಷ್ಟಾಚಾರದಿಂದಾಗಿಯೇ ಇದೆಲ್ಲ ಆಗುತ್ತಿದೆ. ಪ್ರದೀಪ್ ಕೊಲೆಗೆ ಕಾರಣವಾದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು. ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಅವರಿಗೆ ಶಿಕ್ಷೆ ಆಗಬೇಕು. ಅವರನ್ನು ಬಂಧಿಸಬೇಕು ಕಂಬಿ ಹಿಂದೆ ಕಳಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಮೊದಲ ಓವರ್ ನಲ್ಲೇ ಹ್ಯಾಟ್ರಿಕ್.. : ಉನಾದ್ಕತ್ ದಾಳಿಗೆ ತತ್ತರಿಸಿದ ದಿಲ್ಲಿ
Related Articles
ಸಿದ್ದರಾಮಯ್ಯ ಮಾತನಾಡಿ, ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆಯಾಗಿದೆ. ಪ್ರದೀಪ್ ಪತ್ನಿ ನ್ಯಾಯ ಕೊಡಿಸಿ ಎಂದು ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ದೆವು. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಎನ್ನುವುದು ಇವರ ವಾದ ಎಂದರು.
ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್ ಗೆ ಮಾಡಿದ್ದಾರೆ. ಡೆತ್ ನೋಟ್ ನಲ್ಲಿ 6 ಜನರ ಹೆಸರು ಇದೆ. ಲಿಂಬಾವಳಿ ಹೆಸರು ಇದೆ. ಈಗಾಗಲೇ ಎಫ್ಐಆರ್ ಆಗಿದೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲರನ್ನು ಬಂಧಿಸಬೇಕು. ಸಾವಿಗೆ ಕಾರಣವಾದರ ಮೇಲೆ ಕಾನೂನು ಕ್ರಮ ಆಗಬೇಕು. ಶಿಕ್ಷೆ ಆಗುವಂತೆ ಮಾಡಬೇಕು. ಶಾಸಕರಿದ್ದರೂ ತಪ್ಪು ಯಾರೇ ಮಾಡಿದ್ರು ತಪ್ಪು. ಕಾನೂನು ಪ್ರಕಾರ ಕ್ರಮ ಆಗಬೇಕು. ಶಾಸಕರನ್ನು ಅರೆಸ್ಟ್ ಮಾಡಬೇಕು. ಇಲ್ಲದೆ ಹೋದ್ರೆ ಸಾಕ್ಷಿ ನಾಶ ಮಾಡಬಹುದು ಎಂದರು.