Advertisement
ಇದೇ ವೇಳೆ ಮಾತನಾಡಿದ ನಿರ್ದೇಶಕ ರಾಜಕುಮಾರ ಅಸ್ಕಿ, “ರಂಗ ಸಮುದ್ರ’ ಎಂದರೆ ಊರಿನ ಹೆಸರು. ಈ ಕಥೆಯನ್ನು ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಮುಂದೆ ಹೇಳಿದಾಗ ಅವರು, ರಂಗಾಯಣ ರಘು ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸದರೆ ಚೆನ್ನಾಗಿರುತ್ತದೆ ಎಂದರು. ನನಗೂ ಅವರ ಬಳಿ ಈ ಪಾತ್ರ ಮಾಡಿಸಬೇಕೆಂಬ ಆಸೆಯಿತ್ತು. ಕೊನೆಗೆ ರಂಗಾಯಣ ರಘು ಅಭಿನಯಿಸಲು ಒಪ್ಪಿಗೆ ನೀಡಿ ನಮ್ಮ ಆಸೆ ಈಡೇರಿಸಿದರು. ಈ ಸಿನಿಮಾವನ್ನು ಮೊದಲು ನೋಡಿದ ನಟ ಪುನೀತ್ ರಾಜಕುಮಾರ್ ಸಿನಿಮಾದಲ್ಲಿ ಜಿಲ್ಲಾಧಿಕಾರಿ (ಅತಿಥಿ ಪಾತ್ರದಲ್ಲಿ) ಆಗಿ ನಟಿಸುವುದಾಗಿ ಹೇಳಿದ್ದರು. ಆದರೆ ವಿಧಿಯಾಟದಿಂದ ಅದು ಆಗಲಿಲ್ಲ. ಕಲಾವಿದರ ಹಾಗೂ ತಂತ್ರಜ್ಞರ ಸಹಾಕರದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎಂದರು.
Advertisement
Rangasamudra: ಹೊರಬಂತು ‘ರಂಗ ಸಮುದ್ರ’ ಟ್ರೇಲರ್ ಜನಪದ ಸೊಗಡಿನ ಚಿತ್ರ
02:42 PM Jan 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.