Advertisement

ಕಾಲೇಜುಗಳಲ್ಲಿ ರೇಂಜರ್‌ ರೋವರ್‌ ಘಟಕ

11:49 AM Aug 01, 2018 | |

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಅಧೀನದ ಕಾಲೇಜುಗಳಲ್ಲಿ ರೇಂಜರ್‌-ರೋವರ್‌ ಘಟಕ ಸ್ಥಾಪಿಸುವ
ಕಾರ್ಯ ಇನ್ನಷ್ಟು ಚುರುಕುಗೊಳಿಸಲಾಗುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರಾಜ್ಯ ಪ್ರಧಾನ ಆಯುಕ್ತ
ಪಿ.ಜಿ.ಆರ್‌.ಸಿಂಧ್ಯಾ ಹೇಳಿದ್ದಾರೆ.

Advertisement

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ
ಜಿಲ್ಲಾಮಟ್ಟದ ಗೀತಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ
ವಿಶ್ವವಿದ್ಯಾಲಯದ ಅಧೀನದ ಕಾಲೇಜಿನಲ್ಲಿ ರೇಂಜರ್‌-ರೋವರ್‌ ಘಟಕ ಸ್ಥಾಪಿಸುವ ಬಗ್ಗೆ ಹಿಂದಿನ ಸರ್ಕಾರ ಆದೇಶ
ಹೊರಡಿಸಿದೆ. ಆದರೆ, ಯಾವುದೇ ವಿಶ್ವವಿದ್ಯಾಲಯದಲ್ಲೂ ಅದು ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾಲೇಜುಗಳಲ್ಲಿ ರೇಂಜರ್‌-ರೋವರ್‌ ಘಟಕ ಸ್ಥಾಪಿಸಲು ಸರ್ಕಾರವೇ ನಿರ್ದೇಶಿಸಿದ್ದರೂ. ಹಲವು ಕಾಲೇಜಿನಲ್ಲಿ ಜಾರಿಗೆ ಬಂದಿಲ್ಲ. ವಿಧದ ಕಾರಣಗಳಿಂದಾಗಿ ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ನಿಂದ ಕಾಲೇಜುಗಳ ಮೇಲೆ ಈ ಕುರಿತು ಹೆಚ್ಚಿನ ಒತ್ತಡವನ್ನು ಹಾಕಿರಲಿಲ್ಲ. ಪ್ರಸಕ್ತ ಸಾಲಿನಿಂದ ಆ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡಲಿದ್ದೇವೆ.

ವಿಶ್ವವಿದ್ಯಾಲಯದ ಕುಲಪತಿಗಳು ಕೂಡ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡದರು. ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆ ಶಾಲಾ ಕಾಲೇಜಿನಲ್ಲಿ ವ್ಯಕ್ತಿ ನಿರ್ಮಾಣ ಕಾರ್ಯ ಮಾಡುತ್ತಿದೆ. 

ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಪ್ರತಿಭೆಗಳನ್ನು ಗುರುತಿಸುವ ಕೆಲಸ ಆಗಬೇಕು. ಸಂಗೀತ ಅತ್ಯಂತ ದೊಡ್ಡ
ಕಲೆ, ಅದನ್ನು ಜೀವನದಲ್ಲಿ ಅಳವಡಿಸಿ ಕೊಂಡು ಹೃದಯದಲ್ಲಿ ತುಂಬಿಕೊಳ್ಳಬೇಕು ಎಂದು ಮಕ್ಕಳಿಗೆ ಹೇಳಿದರು.

Advertisement

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌. ವೇಣುಗೋ ಪಾಲ್‌ ಮಾತನಾಡಿ, ವಿದ್ಯಾರ್ಥಿಗಳು ಸದೃಢ ಆರೋಗ್ಯ ಕಾಪಾಡಿಕೊಳ್ಳಲು ನಿತ್ಯ ವ್ಯಾಯಾಮ ಅಗತ್ಯ. ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಕಾರಾ ತ್ಮಕವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು.

ಬೆಂವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲೂ ರೇಂಜರ್‌-ರೋವರ್‌ ಘಟಕ ಸ್ಥಾಪಿಸುವ ಬಗ್ಗೆ ಸೂಚನೆ ನೀಡಲಾಗುವುದು ಎಂದರು. ಜಿಲ್ಲಾ ಮುಖ್ಯ ಆಯುಕ್ತ ಎಂ.ಕೆ.ಖಾನ್‌, ಜಿಲ್ಲಾ ಆಯುಕ್ತ ಪಿ.ಪಳನಿ ಉಪಸ್ಥಿತರಿದ್ದರು. ವಿವಿಧ ಶಾಲೆಯ ಸುಮಾರು 50 ಸಾವಿರ ವಿದ್ಯಾರ್ಥಿಗಳು ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೆಲ್ಲಿ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳ ತಂಡ ಮೊದಲ ಸ್ಥಾನ, ನ್ಯೂ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಹಾಗೂ ಚಿನ್ಮಯ ವಿದ್ಯಾಲಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡರು. 

Advertisement

Udayavani is now on Telegram. Click here to join our channel and stay updated with the latest news.

Next