Advertisement

ಮಹಿಳೆಯರಿಗೆ ರಾಣಿ ಚನ್ನಮ್ಮ ಆದರ್ಶ: ಪ್ರಕಾಶ ಕುದುರಿ

09:31 AM Oct 24, 2021 | Team Udayavani |

ಕಲಬುರಗಿ: ಬ್ರಿಟಿಷರ ವಿರುದ್ಧ ತಮ್ಮ ಕೊನೆ ಉಸಿರುವವರೆಗೂ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚನ್ನಮ್ಮನ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ತಹಶೀಲ್ದಾರ್‌ ಪ್ರಕಾಶ ಕುದುರಿ ಹೇಳಿದರು.

Advertisement

ನಗರದ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಚನ್ನಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ರಾಣಿ ಚನ್ನಮ್ಮ ಅವರಂತೆ ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸ ಬಹುದು. ಕಿತ್ತೂರು ಚನ್ನಮ್ಮ ಮಹಿಳೆಯರ ಪಾಲಿಗೆ ಆದರ್ಶರು. ಎಂಥಹ ಸಂದರ್ಭ ಬಂದರೂ ವಿಚಲಿತಗಬಾರದು ಎನ್ನುವ ಸಂದೇಶ ನೀಡಿದವರು ಎಂದರು.

ಅಖೀಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಶರಣು ಮೋದಿ ಹಾಗೂ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಮಾತನಾಡಿದರು.

ಆಳಂದ ಅನುಭವ ಮಂಟಪದ ಕೋರಣೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ| ಇಂದುಮತಿ ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು, ಜಿಲ್ಲಾ ವೀರಶೈವ ಸಮಾಜದ ಕಾರ್ಯದರ್ಶಿ ಡಾ| ಶ್ರೀಶೈಲ ಘೋಳಿ, ಮಹಿಳಾ ಘಟಕದ ಅಧ್ಯಕ್ಷೆ ಡಾ| ನಾಗವೇಣಿ ಪಾಟೀಲ, ಪಂಚಮಸಾಲಿ ದೀಕ್ಷಾ ಸಮಾಜದ ಜಿಲ್ಲಾಧ್ಯಕ್ಷ ಶರಣು ಪಪ್ಪಾ ಹಾಗೂ ಸಮಾಜದ ಮುಖಂಡರಾದ ಜಗನ್ನಾಥ ಪಟ್ಟಣಶೆಟ್ಟಿ, ಶರಣು ಖಾನಾಪುರೆ, ಸುಭಾಷ ಬಿಜಾಪುರೆ ಇದ್ದರು.

Advertisement

ಇದನ್ನೂ ಓದಿ: ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

ನಗರದ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅಜಯಂತಿ ಸಮಾರಂಭಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗೈರು ಹಾಜರಾಗಿರುವುದಕ್ಕೆ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಸ್ಪೂರ್ತಿ ಮತ್ತು ದೇಶಭಕ್ತಿಗೆ ಇನ್ನೊಂದು ಹೆಸರು ರಾಣಿ ಚೆನ್ನಮ್ಮ. ಇಂತಹ ವೀರ ಮಹಿಳೆ ಜಯಂತಿಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಉಸ್ತುವಾರಿ ಸಚಿವರು ರೈತರು ಹಾಜರಾಗಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿಗಳು ಮಹಿಳೆಯರೇ ಆಗಿದ್ದರೂ ದೇಶ ಸ್ಮರಿಸುವಂತ ಹೋರಾಟಗಾರ್ತಿಯ ಜಯಂತಿಯಲ್ಲಿ ಭಾಗವಹಿಸದೇ ಇದ್ದಿದ್ದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇನೆ ಎಂದರು.

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜೋತ್ಸ್ನಾ, ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಗೈರು ಆಗಿದ್ದಕ್ಕೆ ಕಾರ್ಯಕ್ರಮದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಯಿತು. ಬೇರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಮಯ ಇರುತ್ತದೆ. ದೇಶಕ್ಕಾಗಿ ಹೋರಾಟ ಮಾಡಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆಗಲಿ, ಅಪರ ಡಿಸಿ ಆಗಲಿ ಪಾಲ್ಗೊಳ್ಳಲು ಆಗುವುದಿಲ್ಲವೇ ಎಂದು ಮುಖಂಡರು ಪ್ರಶ್ನೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next