ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಬ್ಬಂದಿಗಳ ಎಡವಟ್ಟಿನಿಂದ ಬಿಕಾಂ ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಬಿ.ಕಾಂ ಪದವಿಯ 5 ನೇ ಸೆಮಿಸ್ಟರ್ ನ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ಪ್ರಶ್ನೆ ಪತ್ರಿಕೆಯು ಸೂರಿಕೆಯಾಗಿರುವುದರಿಂದ ಇದರ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪರೀಕ್ಷಾ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಇನ್ನುಳಿದ ಪರೀಕ್ಷೆಗಳು ಎಂದಿನಂತೆ ನಡೆಯುತ್ತವೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಎನ್.ಕದಮ್ ತಿಳಿಸಿದ್ದಾರೆ.
5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ
ಬೆಂಗಳೂರು: ಶಾಲೆಗಳ 5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ನ್ಯಾಯಪೀಠ ಆದೇಶ ನೀಡಿದೆ.
ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಈ ತೀರ್ಪನ್ನು ಇಂದು ರದ್ದು ಮಾಡಿದೆ.
ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.