Advertisement
ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಚಾಲನೆ ನೀಡಿ ಮಾತನಾಡಿ, 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದು ಹೇಳಿದರು.
ಸಿಎಂ ಬಟ್ಟೆಗೆ ಕಿಡಿ
ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಜಾಗ ಬಿಡುವ ಉದ್ದೇಶದಿಂದ ಪಕ್ಕಕ್ಕೆ ಸರಿದಾಗ ದೀಪದ ಹತ್ತಿರ ಬಂದರು. ಆಗ ಅವರ ಶಲ್ಯಕ್ಕೆ ಬೆಂಕಿ ತಗಲಿದೆ. ಆಕಸ್ಮಿಕವಾಗಿ ತಾಗಿದ ಕಿಡಿಯನ್ನು ಭದ್ರತಾ ಸಿಬಂದಿ ತತ್‌ಕ್ಷಣವೇ ಆರಿಸಿದರು. ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಎಚ್. ಕೆ. ಪಾಟೀಲ್, ಪ್ರಿಯಾಂಕ್ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ್ ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ರಾಜು ಕಾಗೆ, ಎನ್. ಎ. ಹ್ಯಾರಿಸ್, ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.