Advertisement

“ಸಣ್ಣ ವಿವಿಗಳಿಗೂ ಇನ್ನು ರ್‍ಯಾಂಕಿಂಗ್‌’

06:05 AM Dec 16, 2018 | Team Udayavani |

ಪಣಜಿ: ದೇಶದಲ್ಲಿನ ಸಣ್ಣ ವಿಶ್ವವಿದ್ಯಾನಿಲಯಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅವುಗಳಿಗೆ ರ್‍ಯಾಂಕಿಂಗ್‌ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ. 

Advertisement

ಪಣಜಿಯಲ್ಲಿ ಗೋವಾ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ಪರೀಕ್ಷೆಯೇ ಇಲ್ಲ ಎಂಬ ಕ್ರಮ ಶಿಕ್ಷಣ ವ್ಯವಸ್ಥೆಗೆ ಪೆಟ್ಟು ನೀಡಲಿದೆ. ಹೀಗಾಗಿ, ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿ ಫ‌ಲಿತಾಂಶ ಆಧಾರಿತ ಕಲಿಕಾ ವ್ಯವಸ್ಥೆ ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ರೂಪ ನೀಡಲು ಪ್ರಯತ್ನಿಸುತ್ತಿದೆ ಎಂದು ಜಾವಡೇಕರ್‌ ಪ್ರತಿಪಾದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next