Advertisement

ರ್‍ಯಾಂಕಿಂಗ್ ‌: ಅಶ್ವಿ‌ನ್ 5ನೇ ಸ್ಥಾನ‌, ಪಂತ್‌ 11ನೇ ಸ್ಥಾನಕ್ಕೆ ಜಿಗಿತ

11:15 PM Feb 17, 2021 | Team Udayavani |

ದುಬಾೖ: ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆಲ್‌ರೌಂಡ್‌ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆರ್‌. ಅಶ್ವಿ‌ನ್‌ ನೂತನ ಆಲ್‌ರೌಂಡರ್‌ಗಳ ಯಾದಿಯಲ್ಲಿ 5ನೇ ಸ್ಥಾನಕ್ಕೆ ಏರಿದ್ದಾರೆ.

Advertisement

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ವಿಂಡೀಸ್‌ನ ಜಾಸನ್‌ ಹೋಲ್ಡರ್‌, ಭಾರತದ ರವೀಂದ್ರ ಜಡೇಜ ಮೊದಲೆರಡು ಸ್ಥಾನದಲ್ಲಿದ್ದಾರೆ.
ಬೌಲಿಂಗ್‌ ವಿಭಾಗದ ರ್‍ಯಾಂಕಿಂಗ್‌ನಲ್ಲಿ ಅಶ್ವಿ‌ನ್‌ 7ನೇ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ.

ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಕೂಡ ರ್‍ಯಾಂಕಿಂಗ್‌ನಲ್ಲಿ ಉತ್ತಮ ಪ್ರಗತಿ ಕಂಡಿದ್ದು, ಬ್ಯಾಟಿಂಗ್‌ ವಿಭಾಗದಲ್ಲಿ 11ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕೊಹ್ಲಿ 5ನೇ ಮತ್ತು ಪೂಜಾರ 8ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ:ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾ ತಂಡದ ಡು ಪ್ಲೆಸಿಸ್

Advertisement

Udayavani is now on Telegram. Click here to join our channel and stay updated with the latest news.

Next