Advertisement

ಬಾಲೆಯ ಮೇಲೆ ಅತ್ಯಾಚಾರ: ಚಿತ್ತೂರು ಮೂಲದ ವ್ಯಕ್ತಿ ಸೆರೆ

11:25 AM Jul 30, 2017 | Team Udayavani |

ಬೆಂಗಳೂರು: ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಖಾಸಗಿ ಕಂಪನಿಯ ಭದ್ರತಾ ಸಿಬ್ಬಂದಿಯನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಪೋಕೊÕà ಪ್ರಕರಣದಡಿ ಬಂಧಿಸಿದ್ದಾರೆ. ಮಾಗಡಿ ರಸ್ತೆ ನಿವಾಸಿ ಸುನೀಲ್‌ (29) ಬಂಧಿತ.

Advertisement

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಆರೋಪಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಮಾಗಡಿ ರಸ್ತೆಯಲ್ಲಿ ನೆಲೆಸಿದ್ದ. ಹೈಗ್ರೌಂಡ್ಸ್‌ ಠಾಣಾ ವ್ಯಾಪ್ತಿಯ ಅಲಿ ಅಸ್ಕರ್‌ ರಸ್ತೆಯಲ್ಲಿರುವ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ.

ಇಲ್ಲಿಯೇ ಸಂತ್ರಸ್ತ ಬಾಲಕಿಯ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು. ಜು.27 ರಂದು ಮಧ್ಯಾಹ್ನ 3.30ರ ಸುಮಾರಿಗೆ ಬಾಲಕಿ ಆಟವಾಡುತ್ತಿದ್ದ ಸ್ಥಳಕ್ಕೆ ಬಂದ ಆರೋಪಿ ನಿಮ್ಮ ಪೋಷಕರು ಕರೆಯುತ್ತಿದ್ದಾರೆ ಎಂದು ಬಾಲಕಿಯನ್ನು ಪುಸಲಾಯಿಸಿ ಕ್ರೆಸೆಂಟ್‌ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಈ ಸಂಬಂಧ ಸಂತ್ರಸ್ತೆಯ ಪೋಷಕರು ದೂರು ನೀಡಿದ್ದರು. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next