Advertisement

ಅತ್ಯಾಚಾರ ಯತ್ನ: ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

10:11 PM Jul 12, 2023 | Team Udayavani |

ಬೆಂಗಳೂರು: ವಕೀಲಿಕೆ ಕಲಿಯಲು ಕಚೇರಿಗೆ ಸೇರಿದ ಕಾನೂನು ವಿದ್ಯಾರ್ಥಿನಿ (ಇಂಟರ್ನಿ) ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಯತ್ನ ಆರೋಪ ಸಂಬಂಧ ಮಂಗಳೂರಿನ ವಕೀಲ ಕೆ.ಎಸ್‌.ಎನ್‌ ರಾಜೇಶ್‌ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

Advertisement

ಪ್ರಕರಣ ಸಂಬಂಧ ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಾಖಲಿಸಿದ ಎಫ್ಐಆರ್‌ ಮತ್ತು 3ನೇ ಹೆಚ್ಚವರಿ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ವಕೀಲ ಕೆ.ಎಸ್‌.ಎನ್‌ ರಾಜೇಶ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶಿಸಿದೆ.

ಪ್ರಶಿಕ್ಷಣಾರ್ಥಿಯಾಗಿ ವಕೀಲರ ಕಚೇರಿಗೆ ಸೇರಿದ ಕಾನೂನು ವಿದ್ಯಾರ್ಥಿನಿ ಮೇಲೆ ಈ ರೀತಿಯ ಭಯಾನಕ ಕೃತ್ಯ ನಡೆಸಿದರೆ, ಅದು ಆಕೆಯ ವೃತ್ತಿ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ಸಂಪೂರ್ಣ ವಿಚಾರಣೆ ಎದುರಿಸಿ, ಆರೋಪಿ ದೋಷಮುಕ್ತನಾಗಿ ಬರಲಿ ಎಂದು ಹೇಳಿರುವ ಹೈಕೋರ್ಟ್‌, ವಕೀಲ ಕೆ.ಎಸ್‌.ಎನ್‌. ರಾಜೇಶ್‌ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದರ ಸಂಬಂಧ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ನಿಕಾರಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಪ್ರಕರಣವೇನು?: ಮಂಗಳೂರಿನ ಕಾನೂನು ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಅವರ ಕಚೇರಿಯಲ್ಲಿ ಇಂಟರ್ನ್ಶಿಪ್‌ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ತನ್ನ ಮೇಲೆ ರಾಜೇಶ್‌ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ನೀಡಿದ್ದರು. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು. ಪೊಲೀಸರು ತನಿಖೆ ಪೂರ್ಣಗೊಳಿಸಿ ಅತ್ಯಾಚಾರ, ಲೈಂಗಿಕ ಕಿರುಕುಳ, ಮಹಿಳೆಯ ಘನತಗೆ ಧಕ್ಕೆ ತಂದಿರುವುದು ಸೇರಿದಂತೆ ಹಲವು ಆರೋಪಗಳ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸದ್ಯ ಪ್ರಕರಣವು ಜೆಎಂಎಫ್ಸಿ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದನ್ನು ರದ್ದುಪಡಿಸಲು ಕೋರಿ ಆರೋಪಿ ರಾಜೇಶ್‌ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next