Advertisement

Kadaba ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

11:08 PM Aug 06, 2024 | Team Udayavani |

ಕಡಬ: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

ಕಡಬ ತಾಲೂಕಿನ ಮರ್ಧಾಳ ಸಮೀಪದ ನಿವಾಸಿಗಳಾದ ನಂದನ್‌ ಹಾಗೂ ಮಾಹಿಝ್ ಬಂಧಿತ ಆರೋಪಿಗಳು.

ಆರೋಪಿಗಳನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದ ಪೊಲೀಸರು, ಪ್ರತ್ಯೇಕ 2 ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಂಗಳವಾರ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next