Advertisement

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

01:10 AM Jul 27, 2024 | Team Udayavani |

ಬಂಟ್ವಾಳ: ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ವಿವಾಹಿತನಾಗಿರುವ ಅಮಾrಡಿ ನಿವಾಸಿ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯ ಕುರಿತು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷದಲ್ಲಿ 2 ಬಾರಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next