Advertisement

Ullal ನಗರ ಸಮುದಾಯ ಕೇಂದ್ರದಲ್ಲಿ ಶೀಘ್ರ ಡಯಾಲಿಸಿಸ್‌

11:18 PM Jul 10, 2023 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿರುವ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶೀಘ್ರದಲ್ಲೇ ಡಯಾಲಿಸಿಸ್‌ ಸೇವೆ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

Advertisement

ಸೋಮವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ನ ಬಿ.ಎಂ. ಫಾರೂಖ್‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಉದ್ದೇಶಿತ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರ ಭಾಗವಾಗಿ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಲು ಸಿವಿಲ್‌ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಶೀಘ್ರ ಇಲ್ಲಿ ಡಯಾಲಿಸಿಸ್‌ ಸೇವೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಅಲ್ಲದೆ, ಎಕ್ಸ್‌ರೇ ಸೇವೆ ಆರಂಭಿಸಲು ಸಿದ್ಧತೆ ಮಾಡಲಾಗುತ್ತಿದೆ. ದೇರಳಕಟ್ಟೆಯ ಯೇನೆಪೊಯ ವೈದ್ಯಕೀಯ ಮಹಾವಿದ್ಯಾಲಯದಿಂದ ಈ ಸೇವೆ ಕಲ್ಪಿಸಲಾಗುತ್ತಿದೆ. ಅಗತ್ಯ ಉಪಕರಣಗಳನ್ನು ಕಲ್ಪಿಸಿ, ಹೆರಿಗೆ ಸೇವೆಯನ್ನೂ ಮತ್ತಷ್ಟು ಉತ್ತಮಗೊಳಿಸಲಾಗುವುದು ಎಂದರು.

ಈ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮಾದರಿಯ ನಿಗದಿತ ಮಾನವ ಸಂಪನ್ಮೂಲ ವ್ಯವಸ್ಥೆಯನ್ನು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಮೂಲಕ ಭರ್ತಿ ಮಾಡಲಾಗಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಸೇರಿ ಮಂಜೂರಾದ ಹುದ್ದೆಗಳು 31 ಇವೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ 19 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next