Advertisement

ಪಡಿತರ ಚೀಟಿ ಪ್ರಕ್ರಿಯೆ ಶೀಘ್ರ ಪುನರಾರಂಭ

11:07 AM Jul 12, 2018 | Harsha Rao |

ಉಡುಪಿ: ಚುನಾವಣೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪಡಿತರ ಚೀಟಿ ಪ್ರಕ್ರಿಯೆಯನ್ನು ಶೀಘ್ರ
ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಹಾಗೂ ಈಗಿನ ರೇಷನ್‌ ಕಾರ್ಡ್‌ಗೆ ಹೆಸರು ಸೇರಿಸಲು ಮತ್ತು ತಿದ್ದುಪಡಿ ನಡೆಸಲು ಸರಕಾರ ಸೂಚನೆ ನೀಡಿದೆ.

Advertisement

ಟೆಸ್ಟಿಂಗ್‌ ಪ್ರಕ್ರಿಯೆ ನಡೆಸಿ ಅರ್ಜಿ ಸ್ವೀಕಾರ ನಡೆಯಲಿದೆ. ಗ್ರಾಮೀಣ ಭಾಗಗಳಲ್ಲಿ ಗ್ರಾ.ಪಂ.,ನಗರ ಪ್ರದೇಶಗಳಲ್ಲಿ ಗುರುತಿಸಲಾಗಿರುವ ಕೇಂದ್ರಗಳಲ್ಲಿ ಹೊಸ ಕಾರ್ಡ್‌ಗೆ ಅರ್ಜಿ, ತಿದ್ದುಪಡಿಗೆ ಅರ್ಜಿ ನೀಡಬಹುದು ಎಂದರು.

ನರೇಗಾಕ್ಕೆ ಜನ ಹಿಂದೇಟು
ರಾಷ್ಟ್ರೀಯ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿದ್ದರೂ ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಜನರು ಮುಂದೆ ಬರುತ್ತಿಲ್ಲ. ನರೇಗಾ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಜನರು ಲಭ್ಯವಿಲ್ಲ ಎಂದು ಕೆಲವು ಗ್ರಾ.ಪಂ.ಗಳು ಲಿಖೀತವಾಗಿಯೇ ತಿಳಿಸಿವೆ. ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲೂ ನರೇಗಾ ಅಡಿ ಕೆಲಸ ಮಾಡಲು ಅವಕಾಶ ಇರುವುದರಿಂದ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿ.ಪಂ.ಸಿಇಒ ಶಿವಾನಂದ ಕಾಪಶಿ ಅಧಿಕಾರಿಗಳಿಗೆ ಸೂಚಿಸಿದರು.

108 ಆ್ಯಂಬುಲೆನ್ಸ್‌ಗೆ ಸಿಬಂದಿ ಕೊರತೆ
108 ಆ್ಯಂಬುಲೆನ್ಸ್‌ಗಳಲ್ಲಿ ನರ್ಸ್‌ ಸಹಿತ ಅಗತ್ಯ ಸಿಬಂದಿ ಕೊರತೆ ಕಂಡುಬರುತ್ತಿದೆ. ತುರ್ತು ಸಂದರ್ಭಗಳಲ್ಲಿ ಇವರ ಸೇವೆಯ ಅಗತ್ಯವಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರು ಆರೋಗ್ಯ ಇಲಾಖೆಗೆ ಸೂಚಿಸಿದರು.

ಪ್ಲಾಸ್ಟಿಕ್‌ ಬಳಕೆ ತಡೆಗೆ ಸೂಚನೆ
 ಸರಕಾರಿ ಸಭೆ ಸಮಾರಂಭಗಳಲ್ಲಿ ನೀರಿನ ಬಾಟಲಿ, ಹೂಗುತ್ಛ, ಲೋಟ ಮತ್ತಿತರ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದಂತೆ ಈಗಾಗಲೇ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಜಿ.ಪಂ. ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌ , ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next