ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 465 ಮತ್ತು 469 (ಪ್ರತಿಷ್ಠೆಗೆ ಹಾನಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66 ಸಿ ಮತ್ತು 66 ಇ (ಗೌಪ್ಯತೆ ಉಲ್ಲಂಘನೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡೀಪ್‌ಫೇಕ್ ಎನ್ನುವುದು ಡಿಜಿಟಲ್ ವಿಧಾನವಾಗಿದ್ದು, ಬಳಕೆದಾರರು ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಒಬ್ಬ ವ್ಯಕ್ತಿಯ ಮುಖವನ್ನು ಇನ್ನೊಬ್ಬರ ಮುಖಕ್ಕೆ ಹೋಲುವ ರೀತಿಯಲ್ಲಿ ಬದಲಾಯಿಸಬಹುದು.
ಈ ವಿಧಾನದಿಂದಲೇ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡಿತ್ತು ಅಲ್ಲದೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಸೇರಿದಂತೆ ಚಿತ್ರರಂಗದ ಹಲವು ನಟ ನಟಿಯರು ಆಕ್ರೋಶ ಹೊರಹಾಕಿದ್ದಾರೆ.
“ಪುಷ್ಪಾ”, “ಮಿಷನ್ ಮಜ್ನು” ಮತ್ತು ಮುಂಬರುವ “ಅನಿಮಲ್” ನಂತಹ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿರುವ ರಶ್ಮಿಕಾ ಮಂದಣ್ಣ ಅವರು ತಮ್ಮ ಡೀಪ್‌ಫೇಕ್ ವೀಡಿಯೊ ವೈರಲ್ ಆದ ನಂತರ ತಂತ್ರಜ್ಞಾನದ ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಡೀಪ್ ಫೇಕ್ ವಿಡಿಯೋ ಗೆ ಸಂಬಂಧಪಟ್ಟಂತೆ ಎಫ್‌ಐಆರ್ ದಾಖಲಿಸಿಕೊಂಡ ದೆಹಲಿ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Daily Horoscope: ಒಂದರ ಮೇಲೊಂದು ಕಿರಿಕಿರಿ ತಂದಿಡುವ ನಕಾರಾತ್ಮಕ ಶಕ್ತಿಗಳ ಹಾವಳಿ