Advertisement

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

03:17 PM May 09, 2024 | Team Udayavani |

ಮುಂಬಯಿ: ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ.

Advertisement

ರಣ್ಬೀರ್ ಕಪೂರ್ ಅವರ ‘ಅನಿಮಲ್’ ಸಿನಿಮಾದಲ್ಲಿ ಕಾಣಿಸಿಕೊಂಡು ಬಿಟೌನ್ ಮಂದಿಯ ಮನಗೆದ್ದ ‘ಕಿರಕ್ ಪಾರ್ಟಿ’ ಬೆಡಗಿ ಈಗ ಬಾಲಿವುಡ್ ನ ಖ್ಯಾತ ನಟನ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇತ್ತೀಚಿಗಷ್ಟೇ ಎ.ಆರ್ ಮುರುಗದಾಸ್ ಹಾಗೂ ಸಲ್ಮಾನ್ ಖಾನ್ ಅವರ ಸಿನಿಮಾ ಅನೌನ್ಸ್ ಆಗಿತ್ತು. ಇದಕ್ಕೆ ‘ಸಿಕಂದರ್’ ಎನ್ನುವ ಟೈಟಲ್ ಇಡಲಾಗಿದೆ. ಈ‌ ಸಿನಿಮಾವನ್ನು ಸಾಜಿದ್ ನಾಡಿಯಾಡ್ವಾಲಾ‌ ನಿರ್ಮಾಣ ಮಾಡಲಿದ್ದಾರೆ.

ಇದೀಗ ಚಿತ್ರತಂಡ ರಶ್ಮಿಕಾ ಮಂದಣ್ಣ ‘ಸಿಕಂದರ್’ ನ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎಂದು ಅನೌನ್ಸ್ ಮಾಡಿದೆ. ಆ ಮೂಲಕ ಇದೇ ಮೊದಲ ಬಾರಿಗೆ ರಶ್ಮಿಕಾ ಸಲ್ಮಾನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ರಶ್ಮಿಕಾ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದ್ದಾರೆ ಎನ್ನಲಾಗಿದೆ.

Advertisement

ಮುಂದಿನ ತಿಂಗಳು ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, 2025 ರ ಈದ್‌ ಹಬ್ಬದಂದು ಸಿನಿಮಾ ತೆರೆ ಕಾಣಲಿದೆ.

ಸದ್ಯ ರಶ್ಮಿಕಾ ಈ ವರ್ಷ ʼಪುಷ್ಪ-2ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next