Advertisement

ರಶ್ಮಿಕಾ ಹೊಸ ಅವತಾರ : ನ್ಯಾಷನಲ್ ಕ್ರಶ್ ಲುಕ್ ನೋಡಿ ಅಭಿಮಾನಿಗಳು ಫಿದಾ

10:50 AM Sep 29, 2021 | Team Udayavani |

ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪಾ ಸಿನಿಮಾ ಭಾರಿ ಕ್ರೇಜ್ ಸೃಷ್ಟಿ ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದೀಗ ಚಿತ್ರದ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ.

Advertisement

ಸದ್ಯ ರಿವೀಲ್ ಆಗಿರುವ ಪೋಸ್ಟರ್ ನಲ್ಲಿ ರಶ್ಮಿಕಾ ಮಂದಣ್ಣ ಹಾಟ್ ಲುಕ್ ನಲ್ಲಿ ಕಾಣಿಸಿದ್ದಾರೆ. ಸೀರೆಯನ್ನುಟ್ಟು ಸಿಂಗಾರ ಮಾಡಿಕೊಳ್ಳುತ್ತಿರುವ ಪೋಸ್ಟರ್ ಅಭಿಮಾನಿಗಳಿಗೆ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಇನ್ನು ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಶ್ರೀವಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಪುಷ್ಪಾ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಅಲ್ಲು ಅರ್ಜುನ್ ಲುಕ್, ಟೀಸರ್ ಮತ್ತು ಒಂದು ಹಾಡನ್ನೂ ರಿಲೀಸ್ ಮಾಡಿರುವ ಚಿತ್ರತಂಡ ಬಿಡುಗಡೆಗೆ ಸಿದ್ಧವಾಗಿದೆ. ಇನ್ನು ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 25ಕ್ಕೆ ಪುಷ್ಪನ ಅಬ್ಬರ ಶುರುವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next