ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ರಂಗ ಪ್ರವೇಶಿಸಿ ಸದ್ಯ ತೆಲುಗು ಚಿತ್ರರಂಗದಲ್ಲಿ ಭಾರೀ ಸದ್ದು ಮಾಡುತ್ತಿರುವ ರಶ್ಮಿಕಾ ಮಂದಣ್ಣ ತಮ್ಮ ಹೆಸರು ಬದಲಾವಣೆ ಮಾಡಿದ್ದಾರಾ? ಹೀಗೊಂದು ಡೌಟು ರಶ್ಮಿಕಾ ಅಭಿಮಾನಿಗಳಿಗೆ ಕಾಡುತ್ತಿದೆ. ಅದಕ್ಕೆ ಕಾರಣ ಇತ್ತೀಚೆಗೆ ತೆರೆಕಂಡ ಪುಷ್ಪ ಚಿತ್ರ.
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ ಪುಷ್ಪ ಚಿತ್ರದ ಮೊದಲ ಭಾಗ ಇತ್ತೀಚೆಗೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ಜ.7ರಂದು ಓಟಿಟಿ ವೇದಿಕೆ ಅಮೇಜಾನ್ ಪ್ರೈಮ್ ನಲ್ಲೂ ಬಿಡುಗಡೆಯಾಗಿದೆ.
ರಕ್ತ ಚಂದನ ಕಳ್ಳಸಾಗಾಣಿಕೆಯ ಕುರಿತಾದ ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಇಬ್ಬರು ಡಿ ಗ್ಲಾಮರ್ ಪಾತ್ರದಲ್ಲಿ ಮಿಂಚಿದ್ದಾರೆ. ಆದರೆ ಚಿತ್ರದ ಕೊನೆಯಲ್ಲಿ ರಶ್ಮಿಕಾ ಹೆಸರನ್ನು ತಪ್ಪಾಗಿ ಮುದ್ರಿಸಿದ್ದು, ಅಭಿಮಾನಿಗಳ ಕೋಪಕ್ಕೆ ಚಿತ್ರ ತಂಡ ಗುರಿಯಾಗಿದೆ.
ಇದನ್ನೂ ಓದಿ:ಸುಕೇಶ್ ಜೊತೆಗಿನ ಸ್ನೇಹ ಸಂಬಂಧದ ಬಗ್ಗೆ ಮೊದಲ ಬಾರಿ ಮೌನ ಮುರಿದ ಜಾಕ್ವೆಲಿನ್
ಚಿತ್ರದ ಕೊನೆಯಲ್ಲಿ ರಶ್ಮಿಕಾ ಮಂದಣ್ಣ ಹೆಸರಿನ ಬದಲಿಗೆ ರಶ್ಮಿಕ ಮಡೋಣ ಎಂದು ತಪ್ಪಾಗಿ ಮುದ್ರಿಸಲಾಗಿದೆ. ಈ ಬಗ್ಗೆ ಹಲವು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.