Advertisement

Adalat: ಸೆ.9ಕ್ಕೆ ರಾಷ್ಟ್ರೀಯ ಅದಾಲತ್‌

11:28 PM Aug 20, 2023 | Team Udayavani |

ಬೆಂಗಳೂರು: ಸೆಪ್ಟಂಬರ್‌ 9ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಕೋರ್ಟ್‌ಗಳಲ್ಲಿ ವಿಚಾರಣ ಹಂತದಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಬೆಂಗಳೂರು ನಗರ ಪ್ರಧಾನ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ ಪೈ ತಿಳಿಸಿದ್ಧಾರೆ.

Advertisement

ಈ ಕುರಿತು ನಗರದ ಸಿವಿಲ್‌ ಕೋರ್ಟ್‌ ಆವರಣಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಅಲ್ಲದೆ ಅದಾಲತ್‌ನಲ್ಲಿ ಉಭಯ ಪಕ್ಷಗಾರರಿಗೆ ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುತ್ತದೆ ಎಂದರು.

ಶೇ.50 ರಿಯಾಯಿತಿ ಸೆ.9ಕ್ಕೆ ಅಂತ್ಯ
ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಬಾಕಿ ಪ್ರಕರಣಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಶುಲ್ಕ ಪಾವತಿ ಮಾಡುವುದಕ್ಕೆ ನೀಡಿದ್ದ ಅವಕಾಶ ಇದೇ ಸೆ.9ಕ್ಕೆ ಅಂತ್ಯಗೊಳ್ಳಲಿದೆ. ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರ ಸೂಚನೆ ಮೇರೆಗೆ ರಿಯಾಯಿತಿ ಶುಲ್ಕ ಪಾವತಿಗೆ ಸರಕಾರ ಆದೇಶ ನೀಡಿತ್ತು. ಈ ಆದೇಶವನ್ನು ಈಗಾಗಲೇ ಎರಡು ಬಾರಿ ವಿಸ್ತರಿಸಲಾಗಿದೆ. ಆದ್ದರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಮೊತ್ತ ಬಾಕಿ ಉಳಿಸಿಕೊಂಡಿರುವವರು ತತ್‌ಕ್ಷಣ ಪಾವತಿ ಮಾಡಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next