Advertisement

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

11:42 PM Nov 08, 2024 | Team Udayavani |

ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌ ಅನ್ನು ಆಯೋಜಿಸಲಾಗಿದೆ.

Advertisement

ಸಾರ್ವಜನಿಕರು ನ್ಯಾಯಾಲಯ ದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.

ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾದ ಪ್ರಕರಣಗಳು: ಮೋಟಾರು ವಾಹನ ಅಪಘಾತ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಚೆಕ್‌ ಅಮಾನ್ಯ ಹಾಗೂ ಬ್ಯಾಂಕ್‌ ಸಾಲ ವಸೂಲಾತಿ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾ ಧೀನ ಹಾಗೂ ಭೂ ಸ್ವಾ ಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್‌ ಹಾಗೂ ಕ್ರಿಮಿನಲ್‌ ಪ್ರಕರಣಗಳು.

ಲೋಕ ಅದಾಲತ್‌ನಲ್ಲಿ ನ್ಯಾಯಾಧಿಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅ ಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜೀ ಮಾಡಕೊಳ್ಳಲು ಸೂಕ್ತ ಮಾರ್ಗದರ್ಶನ ವನ್ನು ನೀಡಲಾಗುತ್ತದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ವಾಗಿ ಮರುಪಾವತಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next