Advertisement

ಟ್ರಾಯ್‌ ನಿಯಮದಂತೆ ದರ

01:20 PM Dec 12, 2019 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿರುವ ಕೇಬಲ್‌ ಆಪರೇಟರ್‌ಗಳು ಪ್ರಧಾನ ಅಂಚೆ ಕಚೇರಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ನವೀಕರಣಗೊಳ್ಳದ ಕೇಬಲ್‌ ಆಪರೇಟರ್‌ಗಳ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಕೇಬಲ್‌ ಟೆಲಿವಿಷನ್‌ ಕಾಯ್ದೆಯ ನಿರ್ವಹಣಾ ಸಮಿತಿ ಸಭೆಯಲ್ಲಿ ಮತನಾಡಿದರು. ಕೇಬಲ್‌ ಆಪರೇಟರ್‌ಗಳು ಪ್ರಧಾನ ಅಂಚೆ ಕಚೇರಿಯಲ್ಲಿ ನೋಂದಣಿ ಮಾಡದವರನ್ನು ಅನ ಧಿಕೃತ ಎಂದು ಪರಿಗಣಿಸಿ ಅವರ ವಿರುದ್ಧವು ಸಹ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಂದ ಟ್ರಾಯ್‌ ಅಡಿಯಲ್ಲಿ ನಿಗದಿಪಡಿಸಿದ ಮಾಸಿಕ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ ಎಂದರು.

ಕೇಬಲ್‌ ನೆಟ್‌ವರ್ಕನಲ್ಲಿ ಪ್ರೀಟು ಏರ್‌ ಚಾನೆಲ್‌ ಗಳು ಮತ್ತು ಆಜ್ಞಾಪಕ ಪ್ರಸಾರಕ್ಕೆ ಅ ಧಿಸೂಚಿಸಲಾದ ಚಾನೆಲ್‌ಗ‌ಳ ಲಭ್ಯತೆ ಬಗ್ಗೆ ಮೇಲ್ವಿಚಾರಣೆ, ಸ್ಥಳೀಯವಾಗಿ ಪ್ರಸಾರ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆಯೂ ಸ್ಥಳೀಯ ಕೇಬಲ್‌ ಆಪರೇಟರ್‌ಗಳ ವಿರುದ್ದ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿದರು.

ಟಿವಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮ ಮತ್ತು ಜಾಹೀರಾತುಗಳ ಬಗ್ಗೆ ಕೇಬಲ್‌ ಆಪರೇಟರ್‌ಗಳ ಸೇವೆಯ ನೂನ್ಯತೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಜಿಲ್ಲಾ ಮಟ್ಟದಲ್ಲಿ ದೂರು ಕೋಶಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಸ್ಥಳೀಯ ಕೇಬಲ್‌ ಚಾನೆಲ್‌ಗ‌ಳು ಹಾಗೂ ಕೇಬಲ್‌ ಆಪರೇಟರ್‌ಗಳು ಇನ್ನು ಮುಂದೆ ತಾವು ಪ್ರಸಾರ ಮಾಡುವ ಎಲ್ಲ ಕಾರ್ಯಕ್ರಮಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಕೇಳಿದ ತಕ್ಷಣ ದಾಖಲೆ ಹಾಗೂ ದೃಶ್ಯಗಳನ್ನು ಹಾಜರುಪಡಿಸಲು ಬದ್ದರಾಗಿರಬೇಕು. ಯಾವುದೇ ಟೆಲಿವಿಷನ್‌ ಕಾರ್ಯಕ್ರಮ ಸಾರ್ವಜನಿಕ ವ್ಯವಸ್ಥೆಗೆ ಭಂಗ ಉಂಟು ಮಾಡಿದರೆ ಅಥವಾ ಯಾವುದೇ ಸಮುದಾಯಗಳ ಮಧ್ಯೆ ದ್ವೇಷ ಅಥವಾ ನೋವುಂಟು ಮಾಡಿದರೆ, ಈ ಬಗ್ಗೆ ಕ್ರಮ ಕೈಗೊಳ್ಳಲು ಸಮಿತಿ ಶಿಫಾರಸು ಮಾಡಲಿದೆ. ಖಾಸಗಿ ಟಿವಿಗಳ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

Advertisement

ಸಮಾಜದ ಹಿತಕ್ಕೆ ಭಂಗ ತರುವಂತಹ ಕಾರ್ಯಕ್ರಮ ಪ್ರಸಾರ ಮಾಡುವ ಕೇಬಲ್‌ ಆಪರೇಟರ್‌ ಹಾಗೂ ಚಾನೆಲ್‌ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ ಕಾಯ್ದೆ ಉಲ್ಲಂಘಿಸಿದಲ್ಲಿ ಕೇಬಲ್‌ ಆಪರೇಟರ್‌ಗಳ ಉಪಕರಣವನ್ನು ವಶಪಡಿಸಿಕೊಳ್ಳುವ ಮತ್ತು ಮುಟ್ಟುಗೋಲು ಹಾಕುವ ಅಧಿಕಾರ ಅಧಿಕೃತ ಅಧಿಕಾರಿಗಳು ಹೊಂದಿರುತ್ತಾರೆ ಎಂದರು. ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಮಾತನಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಕೇಬಲ್‌ ಟೆಲಿವಿಷನ್‌ ಕಾಯ್ದೆಯ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಸದಸ್ಯರಾದ ಜಿಲ್ಲಾ ಆಸ್ಪತ್ರೆಯ ಮನೋಶಾಸ್ತ್ರಜ್ಞ ಡಾ| ರವಿ, ಜಿಲ್ಲಾ ಕೆಎಚ್‌ಪಿಟಿಯ ತೇಜಶ್ವಿ‌ನಿ ಹಿರೇಮಠ, ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪ್ರಾಚಾರ್ಯೆ ಸುಷ್ಮಾ ಒಡೆಯರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next