Advertisement

BJP ಕಾಲದಲ್ಲಿ ಸಿಎಂ-ಡಿಸಿಎಂ ಹುದ್ದೆಗೂ ರೇಟ್‌ ಫಿಕ್ಸ್‌: ಮಂಜುನಾಥ ಭಂಡಾರಿ

11:01 PM Jul 19, 2024 | Team Udayavani |

ಬೆಂಗಳೂರು: ಬಿಜೆಪಿ ಅಧಿಕಾರಾವಧಿಯಲ್ಲಿ ಸ್ವತಃ ಸಿಎಂ-ಡಿಸಿಎಂ ಹುದ್ದೆಗಳಿಗೂ ರೇಟ್‌ ಫಿಕ್ಸ್‌ ಆಗಿತ್ತು. ವರ್ಗಾವಣೆಯಂತೂ ಒಂದು ದಂಧೆಯಾಗಿತ್ತು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ವಾಗ್ಧಾಳಿ ನಡೆಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಅನಂತರ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಪಿಡಿಒಗಳ ವರ್ಗಾವಣೆ, ಕಂದಾಯ ಇಲಾಖೆಯಲ್ಲಿ ಉಪನೋಂದಣಾಧಿಕಾರಿಗಳ ವರ್ಗಾವಣೆ, ಆರೋಗ್ಯ ಇಲಾಖೆಯಲ್ಲಿ ವೈದ್ಯರ ವರ್ಗಾವಣೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಕೌನ್ಸೆಲಿಂಗ್‌ ಜಾರಿಗೆ ತಂದಿದೆ. ಆದರೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆ ಪಡೆಯಲು ಎಷ್ಟು ಸಾವಿರ ಕೋಟಿ ನೀಡಬೇಕು ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಯಲು ಮಾಡಿದ್ದರು ಎಂದು ತಿರುಗೇಟು ನೀಡಿದರು.

ನಮ್ಮ ಸರ್ಕಾರ ಅಧಿಕಾರಿಗಳ ನೇಮಕದಲ್ಲಿ, ವರ್ಗಾವಣೆಯಲ್ಲಿ ಯಾವುದೇ ಭ್ರಷ್ಟಾಚಾರ ಮಾಡುತ್ತಿಲ್ಲ. ಅಧಿಕಾರಿಗಳನ್ನು ಅವರಷ್ಟಕ್ಕೇ ಕಾರ್ಯನಿರ್ವಹಿಸಲು ಬಿಡುತ್ತಿದೆ. ಗೃಹ ಇಲಾಖೆಯಲ್ಲಿ ಅಧಿಕಾರಿಗಳು ಒಮ್ಮೆ ವರ್ಗಾವಣೆಯಾದ ನಂತರ ಅವರು ಎರಡು ವರ್ಷ ಆ ಹುದ್ದೆಯಲ್ಲಿರಬೇಕು ಎಂದು ಕಾನೂನು ತಿದ್ದುಪಡಿ ತರಲು ಮುಂದಾಗಿದೆ. ಸಿ.ಟಿ. ರವಿ ಆಧಾರವಿಲ್ಲದ ಹೇಳಿಕೆಗಳನ್ನು ನೀಡಬಾರದು ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next