Advertisement

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

08:59 PM Oct 09, 2024 | Team Udayavani |

ಮುಂಬೈ: ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

Advertisement

ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಟಾಟಾ ಅವರನ್ನು ಕಳೆದ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆಸ್ಪತ್ರೆಯ ಹಿರಿಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ಆಸ್ಪತ್ರೆಗೆ ದಾಖಲಾದ ಕುರಿತು ಸ್ವತಃ ರತನ್ ಟಾಟಾ ಅವರೇ ಮಾಹಿತಿ ಹಂಚಿಕೊಂಡಿದ್ದು ಎಂದಿನಂತೆ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ, ಸಾರ್ವಜನಿಕರು ತಪ್ಪು ತಿಳಿದುಕೊಳ್ಳಬೇಡಿ ಆತಂಕ ಪಡುವ ಯಾವುದೇ ವಿಚಾರ ಇಲ್ಲ, ಸಾರ್ವಜನಿಕರು ಮತ್ತು ಮಾಧ್ಯಮಗಳು ತಪ್ಪು ಮಾಹಿತಿ ಹರಡಿಸದಂತೆ ವಿನಂತಿಸಿದ್ದರು. ಆದರೆ ಇದೀಗ ಟಾಟಾ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮ*ಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next