Advertisement

ಪಡಿತರ ಚೀಟಿಗೆ ಇ-ಕೆವೈಸಿ: ನಿಯಮ ಸಡಿಲಿಕೆ

12:12 AM Jun 10, 2022 | Team Udayavani |

ಉಡುಪಿ/ಮಂಗಳೂರು : ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂ. 30ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.

Advertisement

ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದೆ. ಇದುವರೆಗೂ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಬಹುದಾಗಿದೆ (ಆಧಾರ್‌ ದೃಢೀಕರಣ ಇ-ಕೆವೈಸಿ).

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್‌ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಜೂ. 30ರ ಒಳಗೆ ಇ-ಕೆವೈಸಿ ಮಾಡಿಸದೆ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ರದ್ದು ಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next