Advertisement

ಪಡಿತರ ಚೀಟಿ: ಇ-ಕೆವೈಸಿಗೆ ಅಂತಿಮ ಅವಕಾಶ

12:48 AM Sep 02, 2021 | Team Udayavani |

ಉಡುಪಿ/ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿಯ ಸದಸ್ಯರು ಸೆ. 10ರೊಳಗೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಬಹುದು.

Advertisement

ಪರಿಶಿಷ್ಟ ಜಾತಿ, ಪಂಗಡದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಮತ್ತು ಅನಿಲ ಸಂಪರ್ಕ ಹೊಂದಿರುವ ಮಾಹಿತಿ, ಮೊಬೈಲ್‌ ಸಂಖ್ಯೆಯನ್ನು ನ್ಯಾಯಬೆಲೆ ಅಂಗಡಿಗೆ ಕಡ್ಡಾಯವಾಗಿ ಒದಗಿಸ‌ಬೇಕು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಪ್ರಕ ಟನೆ ತಿಳಿಸಿದೆ.

2020ರ ಫೆಬ್ರವರಿ ಅನಂತರ ವಿತರಿಸಿರುವ ಹೊಸ ಹಾಗೂ ತಿದ್ದುಪಡಿ ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ, ಆದ್ಯತಾ (ಬಿಪಿಎಲ್‌) ಹಾಗೂ ಆದ್ಯತೇತರ ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಬೇಕಾಗಿದೆ. ಇ-ಕೆವೈಸಿಯನ್ನು ಉಚಿತವಾಗಿ ಮಾಡಲಾಗುತ್ತಿದೆ.

ಯಾರಾದರೂ ಹಣ ಕೇಳಿದಲ್ಲಿ ಅಥವಾ ಏನಾದರೂ ದೂರುಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಹಶೀಲ್ದಾರರು ಮತ್ತು ಮಂಗಳೂರಿನ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next