Advertisement

ಪಡಿತರ ಚೀಟಿ ವಿತರಣೆ ವ್ಯವಸ್ಥೆ ಹದಗೆಟ್ಟಿದೆ: ಅನರ್ಹರಿಗೂ ಬಿಪಿಎಲ್‌ ಕಾರ್ಡ್‌ 

11:38 AM Dec 26, 2019 | sudhir |

ಜಮಖಂಡಿ: ರಾಜ್ಯದಲ್ಲಿ ಪಡಿತರ ಚೀಟಿ ವಿತರಣೆ ವ್ಯವಸ್ಥೆ ಹದಗೆಟ್ಟಿದೆ. ಅನರ್ಹರೂ ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ. ಕಂದಾಯ ಮತ್ತು ಸಾರಿಗೆ ಇಲಾಖೆ ಜತೆಗೂಡಿ ಆಧಾರ ಲಿಂಕ್‌ ಮಾಡುವ ಕಾರ್ಯ ಮಾಡುತ್ತಿದ್ದು, ಎಪ್ರಿಲ್‌ ತಿಂಗಳಲ್ಲಿ ನೈಜ ಬಿಪಿಎಲ್‌ ಫಲಾನುಭವಿಗಳ ಮಾಹಿತಿ ಲಭ್ಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಜನವರಿ-ಫೆಬ್ರವರಿ ತಿಂಗಳಲ್ಲಿ ಎರಡೂ ಇಲಾಖೆಗಳಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗುವುದು. ಕೇಂದ್ರ ಸಚಿವೆ ಸ್ಮತಿ ಇರಾನಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದ್ದು, ಅಂಗನವಾಡಿಯಲ್ಲಿ ಈಗಿರುವ ವ್ಯವಸ್ಥೆಯನ್ನು ಸಂಪೂರ್ಣ ಬದಲಾಯಿಸಲಾಗುವುದು. ಅಂಗನವಾಡಿಗಳ ಸಮಸ್ಯೆ ನಿವಾರಣೆಗೆ 3 ತಿಂಗಳುಗಳ ಕಾಲಾವಕಾಶ ಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next