Advertisement

ಚಿಕ್ಕಬಳ್ಳಾಪುರ : ಲಾಕ್‍ಡೌನ್ ಅವಧಿಯಲ್ಲೂ ಪಡಿತರ ವಿತರಣೆಗೆ ಅವಕಾಶ

09:20 PM May 26, 2021 | Team Udayavani |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಮೇ 27ರಿಂದ 31ರ ಬೆಳಗ್ಗೆ 6 ಗಂಟೆಯ ತನಕ ಸಂಪೂರ್ಣವಾಗಿ ಲಾಕ್ಡೌನ್ ಘೋಷಣೆ ಮಾಡಿದೆ ಈ ಅವಧಿಯಲ್ಲಿ ಪಡಿತರ ಚೀಟಿದಾರರಿಗೆ ಅನುಕೂಲ ಕಲ್ಪಿಸುವ ದೃಷ್ಟಿಕೋನದಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ತನಕ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ವಿತರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಈಗಾಗಲೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರಾಸರಿ 79% ರಷ್ಟು ಪಡಿತರ ವಿತರಣೆಯಾಗಿದ್ದು ಉಳಿದಂತೆ 21% ರಷ್ಟು ಪಡಿತರ ವಿತರಣೆ ಬಾಕಿ ಇರುತ್ತದೆ ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಸಂಪೂರ್ಣ ಲಾಕ್ಡೌನ್ ವೇಳೆಯಲ್ಲಿಯೂ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಕೋವಿಡ್-19 ರ ಮಾರ್ಗಸೂಚಿಗಳನ್ನು ಪಾಲಿಸಿ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸಿ,ಸ್ಯಾನಿಟೈಸರ್ ಸಿಂಪಡಿಸಿಕೊಂಡು ಪಡಿತರ ಆಹಾರ ಧಾನ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಉಪ ನಿರ್ದೇಶಕರು ಆದೇಶಿಸಿದ್ದಾರೆ.

ಇದನ್ನೂ ಓದಿ :ಬ್ಲ್ಯಾಕ್‌ ಫಂಗಸ್‌ಗೆ ಔಷಧಿ ಕೊರತೆ ಇದ್ದು, ಇನ್ನೊಂದು ವಾರದಲ್ಲಿ ನಿವಾರಣೆ : ಡಿಸಿಎಂ

Advertisement

Udayavani is now on Telegram. Click here to join our channel and stay updated with the latest news.

Next