ಮೈಸೂರು: ಕೋವಿಡ್-19 ಲಾಕ್ ಡೌನ್ ಹಿನ್ನಲೆಯಲ್ಲಿ ಜನ ಸಾಮಾನ್ಯರಿಗೆ ಪಡಿತರ ವಿತರಿಸಲು ಮೈಸೂರಿನಲ್ಲಿ ವಿನೂತನವಾಗಿ ವ್ಯವಸ್ಥೆ ಮಾಡಲಾಗಿದ್ದು, ಮನೆ ಬಾಗಿಲಿಗೆ ಪಡಿತರ ಹಂಚಲು ಜಿಲ್ಲಾಡಳಿತ ನಿರ್ಧರಿಸಿದೆ.
ರಾಜ್ಯ ಸರ್ಕಾರದ ಅಡಿಯಲ್ಲಿ ಜಿಲ್ಲಾಢಳಿತದ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಿಪಿಎಲ್ ಕಾರ್ಡುದಾರರಿಗೆ ಮನೆ ಬಾಗಿಲಿಗೆ ಪಡಿತರ ನೀಡಲಿದ್ದಾರೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ನೇತೃತ್ವದಲ್ಲಿ ಪಡಿತರ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತಿದ್ದು, 5 ಕೆಜಿ ಅಕ್ಕಿ, ಎರಡು ಕೆಜಿ ಗೋದಿ ವಿತರಣೆ ಮಾಡಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕರಾದ ಜಿಟಿ ದೇವೆಗೌಡ, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಎಪ್ರಿಲ್ ಮತ್ತು ಮೇ ಎರಡು ತಿಂಗಳ ಪಡಿತರ ಒಂದೇ ಬಾರಿಗೆ ನೀಡಲಾಗುತ್ತಿದ್ದು, ಎಪಿಎಲ್-ಬಿಪಿಎಲ್ ಕಾರ್ಡ್‌ಗಳ 7 ಲಕ್ಷಕ್ಕು ಹೆಚ್ಚು ಜನರಿಗೆ ಪಡಿತರ ವಿತರಿಸಲಾಗುತ್ತಿದೆ.