ವನ್ನು ಒಂದೂವರೆ ರೂಪಾಯಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
Advertisement
ಅರಮನೆ ಮೈದಾನದಲ್ಲಿ ಗುರುವಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಆಯೋಜಿಸಿದ್ದ ಅನ್ನಭಾಗ್ಯ ದಶಮಾನೋತ್ಸವ ಹಾಗೂ ರಾಜ್ಯ ಸರಕಾರಿ ಪಡಿತರ ವಿತರಕರ ಸಮಾವೇಶದಲ್ಲಿ ಅವರು ಮಾತನಾಡಿದರು.
ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ ನಾವು ಹಸಿವು ಮುಕ್ತ ಕರ್ನಾಟಕ ನಿರ್ಮಿಸಲು ಹೊರಟಿದ್ದೇವೆ. ನಾವು ರಾಜ್ಯದ ಬಡವರು, ದಲಿತರು, ಹಿಂದುಳಿದವರು, ಕಾರ್ಮಿಕರು ಮತ್ತು ರೈತರ ಪರವಾದ ನಿಲುವು ಮತ್ತು ಕಾರ್ಯಕ್ರಮ ಗಳನ್ನು ಹೊಂದಿದ್ದೇವೆ ಎಂದು ಸಿಎಂ ಹೇಳಿದರು. ಆಹಾರ ಭದ್ರತಾ ಕಾಯ್ದೆಯನ್ನು ಬಿಜೆಪಿ ವಿರೋಧಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಅನ್ನಭಾಗ್ಯ ಯೋಜನೆ ಬಗ್ಗೆ ಕುಹಕದ ಮಾತುಗಳನ್ನು ಬಿಜೆಪಿ ನಾಯಕರು ಆಡಿದ್ದರು. ಅಂತಹ ಬಿಜೆಪಿ ಅಧಿಕಾರಕ್ಕೆ ಬಂದದ್ದು ದುರಂತ ಎಂದು ಹೇಳಿದರು.
Related Articles
Advertisement