Advertisement

ಪಡಿತರ ಚೀಟಿ ಇಲ್ಲದವರಿಗೂ ಪಡಿತರ?

01:04 PM Apr 09, 2020 | Suhan S |

ಬೆಂಗಳೂರು: ರಾಜ್ಯದಲ್ಲಿ ಶೇ. 25ಕ್ಕೂ ಹೆಚ್ಚು ನಾಗರಿಕರ ಬಳಿ ಇನ್ನೂ ರೇಷನ್‌ ಕಾರ್ಡ್‌ ಇಲ್ಲ. ಹೀಗಾಗಿ ಅಂತಹ ಬಡವರಿಗೂ ಪಡಿತರ ಕೊಡುವ ಉದ್ದೇಶ ಇದೆ. ಈ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿ ಬಡವರಿಗೂ ಪಡಿತರ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಹೇಳಿದ್ದಾರೆ.

Advertisement

ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಕೋವಿಡ್ 19 ದಿಂದ ಕಂಗಾಲಾಗಿರುವ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣರಿಗೆ ಬುಧವಾರ ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. ಆಹಾರ ಪದಾರ್ಥಗಳ ಕೊರತೆಯಾಗದಂತೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಪಡಿತರ ವಿತರಣೆಯಲ್ಲಿ ಲೋಪವಾಗದಂತೆ ನಿಗಾ ವಹಿಸಲಾಗಿದೆ ಎಂದರು.

ಯಾರಿಗೂ ಹಸಿವಿನಿಂದ ಸಾಯುವಂಥ ಪರಿಸ್ಥಿತಿ ನಿರ್ಮಾಣವಾಗಬಾರದು. ಈ ನಿಟ್ಟಿನಲ್ಲಿ ಈ ಆಹಾರ ಕಿಟ್‌ಗಳ ವಿತರಣೆಗೆ ಕಾರಣರಾಗಿರುವ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರನ್ನು ಮನಸಾರೆ ಅಭಿನಂದಿಸುತ್ತೇನೆ. ಉಳ್ಳವರು ಇಲ್ಲದವರಿಗೆ ಅನ್ನದಾನ ಮಾಡಲು ಇದು ಸರಿಯಾದ ಸಮಯ ಎಂದು ಡಿಸಿಎಂ ತಿಳಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಗೋಪಾಲಯ್ಯ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮಲ್ಲೇಶ್ವರಂ ಬ್ರಾಹ್ಮಣ ಸಂಘ ಅಧ್ಯಕ್ಷ ಪ್ರಕಾಶ ಅಯ್ಯಂಗಾರ್‌ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next