ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ.
50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ ನೇತೃತ್ವದಲ್ಲಿ ನಡೆದ ದಾಳಿ ನಡೆಸಿದ್ದಾರೆ.
ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ತಿಳಿದಾಗ ಪಾರ್ಟಿಯಲ್ಲಿದ್ದ ಹಲವರು ತಪ್ಪಿಸಿಕೊಳ್ಳಲು ಯತ್ನಿಸಿದರು. ಪೊಲೀಸ್ ಕಸ್ಟಡಿಯಲ್ಲಿ ಕುಳಿತಿರುವ ಆರೋಪಿಗಳು ತಮ್ಮ ಮುಖವನ್ನು ಮರೆಮಾಚಲು ಪ್ರಯತ್ನಿಸುತ್ತಿರುವುದನ್ನು ತೋರಿಸಿರುವ ವೀಡಿಯೊ ವೈರಲ್ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪೊಲೀಸ್ ವರಿಷ್ಠಾಧಿಕಾರಿ ದಾಳಿಯ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.