Advertisement

ಸಲ್ಮಾನ್ ಖಾನ್ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ

03:53 PM Oct 13, 2021 | Team Udayavani |

ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಅವರು ಇದೀಗ ಮತ್ತೊಂದು ಬಾಲಿವುಡ್‌ ಚಿತ್ರದಿಂದ ಆಫರ್ ಬಂದಿದೆ.  ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಿರ್ಮಿಸಿ ನಟಿಸುತ್ತಿರುವ ‘ಅಂತಿಮ್’ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನಿರ್ದೇಶಿಸುತ್ತಿದ್ದಾರೆ.

Advertisement

ಈ ಕುರಿತು ಸ್ವತಃ ರವಿ ಬಸ್ರೂರ್ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ”ಭಾರತದ ಬಾಯಿಜಾನ್ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುತ್ತಿರುವುದು ಬಹಳ ಸಂತಸ ತಂದಿದೆ. ಸಲ್ಮಾನ್ ಖಾನ್ ಅವರ ಈ ಚಿತ್ರದಲ್ಲಿ ಹಿನ್ನೆಲೆ ಸಂಗೀತ ಹಾಗೂ ಹಾಡುಗಳಿಗೆ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದೇನೆ. ಈ ನನ್ನ ಜರ್ನಿಗೆ ನಿಮ್ಮ ಬೆಂಬಲ ಹೀಗೆ ಇರಲಿ” ಎಂದು ಖುಷಿ ಹಂಚಿಕೊಂಡಿದ್ದಾರೆ.

ಇನ್ನು ಅಂತಿಮ್: ದಿ ಫೈನಲ್ ಟ್ರೂತ್ ಚಿತ್ರವನ್ನು ಮಹೇರ್ಶ ಮಂಜ್ರೆಕರ್ ನಿರ್ದೇಶಿಸುತ್ತಿದ್ದು, ಸಲ್ಮಾನ್ ಖಾನ್ ನಿರ್ಮಾಣ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಆಯುಷ್ ಶರ್ಮಾ ನಾಯಕನಾಗಿದ್ದು, ಪ್ರಗ್ಯಾ ಜೈಸ್ವಾಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಕನ್ನಡದ ಕೆಜಿಎಫ್ ಸಿನಿಮಾ ಬಳಿಕ ರವಿ ಬಸ್ರೂರ್ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಸ್ಯಾಂಡಲ್ವುಡ್‍ನ ಸಾಕಷ್ಟು ಸಿನಿಮಾಗಳು ಅವರ ಕೈಯಲ್ಲಿವೆ. ಇವುಗಳ ಜೊತೆಗೆ ಬಾಲಿವುಡ್‍ನಲ್ಲಿಯೂ ಬ್ಯುಝಿಯಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next