ಬೆಂಗಳೂರು: ಸತತ ಪ್ರಯತ್ನಗಳ ಬಳಿಕ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ವಿಶೇಷ ನ್ಯಾಯಾಲಯವು ರವಿ ಪೂಜಾರಿಯನ್ನು ಮಾರ್ಚ್ 9ರವರೆಗೆ ಮುಂಬೈ ಪೊಲೀಸರ ಕಸ್ಟಡಿಗೆ ನೀಡಿದೆ.
2016ರ ಅಕ್ಟೋಬರ್ 21ರಂದು ಮುಂಬೈನ ವಿಲೆ ಪಾರ್ಲೆ ಏರಿಯಾದಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರವಿ ಪೂಜಾರಿಯನ್ನು ಕಸ್ಟಡಿಗೆ ಪಡೆದಿದ್ದಾರೆ.
ಇದನ್ನೂ ಓದಿ:ಜಗ್ಗೇಶ್ ಅವರ ಇವತ್ತಿನ ಅಗೌರಕ್ಕೆ ಹೊಣೆ ಯಾರು ?: ನಟ ಪ್ರಥಮ್
ಈ ಪ್ರಕರಣದಲ್ಲಿ ರವಿ ಪೂಜಾರಿಯ ಏಳು ಸಹಚರರು ಈಗಾಗಲೇ ಜೈಲಿನಲ್ಲಿದ್ದಾರೆ. ಮಂಗಳವಾರ ಬೆಳಿಗ್ಗೆ ಪಾತಕಿಯನ್ನು ಬೆಂಗಳೂರಿನಿಂದ ರಸ್ತೆ ಮೂಲಕ ಮುಂಬೈಗೆ ಕರೆತರಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕದ ಉಡುಪಿ ಮೂಲದ ರವಿ ಪೂಜಾರಿ 49 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಹಲವು ವರ್ಷಗಳ ಕಾಲ ವಿದೇಶದಲ್ಲಿ ಬಚ್ಚಿಟ್ಟುಕೊಂಡಿದ್ದ ರವಿ ಪೂಜಾರಿಯನ್ನು ಕಳೆದ ವರ್ಷ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆ ತರಲಾಗಿತ್ತು. ನಂತರ ಬೆಂಗಳೂರಿನ ಜೈಲಿನಲ್ಲಿ ಇರಿಸಲಾಗಿತ್ತು.