Advertisement

ಟೀಂ ಇಂಡಿಯಾ ಕೋಚ್ ಹುದ್ದೆಗೆ ರವಿಶಾಸ್ತ್ರಿ ಅರ್ಜಿ; ವರದಿ

06:15 PM Jun 27, 2017 | Sharanya Alva |

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ , ಮಾಜಿ ಕಪ್ತಾನ ರವಿ ಶಾಸ್ತ್ರಿ ಅವರು ಖಾಲಿ ಇರುವ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

Advertisement

ಕಳೆದ ವಾರ ಭಾರತದ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಕನ್ನಡಿಗ ಅನಿಲ್ ಕುಂಬ್ಳೆ ಅವರು ರಾಜೀನಾಮೆ ಸಲ್ಲಿಸಿದ್ದರು. ಬಿಸಿಸಿಐ ಕೂಡಾ ರಾಜೀನಾಮೆಯನ್ನು ಅಂಗೀಕರಿಸಿತ್ತು. ಅಲ್ಲದೇ ಕುಂಬ್ಳೆ ರಾಜೀನಾಮೆಯನ್ನು ಸ್ವಾಗತಿಸುವುದಾಗಿ ತಂಡದ ಕಪ್ತಾನ ವಿರಾಟ್ ಕೊಹ್ಲಿ ಹೇಳಿಕೆ ನೀಡಿದ್ದರು.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಆಯ್ಕೆ ಸಮಿತಿಯ ಟೀಕೆಯ ನಂತರ ಬಿಸಿಸಿಐ ಕೋಚ್ ಹುದ್ದೆಗೆ ಮತ್ತಷ್ಟು ಅರ್ಜಿಗಳನ್ನು ಆಹ್ವಾನಿಸಲು ನಿರ್ಧರಿಸಿತ್ತು.  ಹೌದು ನಾನು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ನಿರ್ಧರಿಸಿರುವುದಾಗಿ ರವಿಶಾಸ್ತ್ರಿ ತಿಳಿಸಿದ್ದಾರೆಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next