Advertisement

‘ಕೆಡಿ’ಯಲ್ಲಿ ಅಣ್ಣಯ್ಯಪ್ಪನಾದ ಕ್ರೇಜಿಸ್ಟಾರ್

03:46 PM Jan 02, 2023 | Team Udayavani |

ಪ್ರೇಮ್‌ ಹಾಗೂ ಧ್ರುವ ಕಾಂಬಿನೇಶನ್‌ನಲ್ಲಿ “ಕೆಡಿ’ ಚಿತ್ರ ಬರುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಕೆಲವು ತಿಂಗಳ ಹಿಂದೆಯಷ್ಟೇ ಚಿತ್ರದ ಟೈಟಲ್‌ ಟೀಸರ್‌ ಅದ್ಧೂರಿಯಾಗಿ ಬಿಡುಗಡೆಯಾಗಿತ್ತು. ಈಗ ಚಿತ್ರತಂಡ  ಚಿತ್ರದ ಪ್ರಮುಖ ಪಾತ್ರವೊಂದನ್ನು ಪರಿಚಯಿಸಿದೆ.

Advertisement

ಇದನ್ನೂ ಓದಿ:ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ..  ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ

ಚಿತ್ರದಲ್ಲಿ ರವಿಚಂದ್ರನ್‌ ಅವರು ಅಣ್ಣಯ್ಯಪ್ಪ ಎಂಬ ಪಾತ್ರ ಮಾಡುತ್ತಿದ್ದಾರೆ. ಹೊಸ ವರ್ಷದ ದಿನ ಅವರ ಪಾತ್ರದ ಲುಕ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ರವಿಚಂದ್ರನ್‌ ಸಖತ್‌ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಈ ಚಿತ್ರದಲ್ಲಿ ಸಂಜಯ್‌ ದತ್‌, ಶಿಲ್ಪಾ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಕೆವಿಎನ್‌ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next