Advertisement

ಜೆಡಿಎಸ್ ಪಕ್ಷ ಸೇರಿದ ಮಾಜಿ ಶಾಸಕ ರವಿಕಾಂತ ಪಾಟೀಲ್

07:20 PM Mar 24, 2021 | Team Udayavani |

ವಿಜಯಪುರ : ಸರಿಯಾಗಿ ತಿಂಗಳ ಹಿಂದೆ ಕಾಂಗ್ರೆಸ್ ಸೇರಲು ನಿರ್ಧರಿಸಿ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದ ಇಂಡಿ ಮಾಜಿ ಶಾಸಕ ರವಿಕಾಂತ ಪಾಟೀಲ್ ಬುಧವಾರ ಜೆಡಿಎಸ್ ಸೇರ್ಪಡೆ ಆಗಿದ್ದಾರೆ. ಜೊತೆಗೆ ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿ ಎಂದು ಹೇಳುವ ಮೂಲಕ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಅವರಿಗೆ ದುಗುಡು ಉಂಟು ಮಾಡಿದ್ದಾರೆ.

Advertisement

ಸಿಂದಗಿ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಯೋಚಿಸುತ್ತಿರುವ ರವಿಕಾಂತ ಪಾಟೀಲ, ಇದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಫೆ.24 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಬೇಷರತ್ತಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾಗಿಯೂ ತಿಳಿಸಿದ್ದರು. ಇದರ ಬೆನ್ನಲ್ಲೇ ಮಾ.24 ರಂದು ದಿಢೀರನೇ ಹೊರೆ ಹೊತ್ತ ಮಹಿಳೆಯ ಪಕ್ಷಕ್ಕೆ ಸೇರ್ಪಡೆಯಾಗಿ ಪಕ್ಷದ ಧ್ವಜ ಸ್ವೀಕರಿಸಿದ್ದಾರೆ. ಬುಧವಾರ ಸಿಂದಗಿ ಪಟ್ಟಣದಲ್ಲಿ ಜರುಗಿದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರಿಂದ ಪಕ್ಷದ ಧ್ವಜ ಸ್ವೀಕಾರ ಮಾಡುವ ಮೂಲಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ :“ದಿಯಾ” ಹಿಂದಿ ರಿಮೇಕ್ ನಲ್ಲೂ ನಾನೇ ಹೀರೋ: ನಟ ಪ್ರಥ್ವಿ ಅಂಬಾರ್

ಇಂಡಿ ವಿಧನಸಭೆ ಕ್ಷೇತ್ರದಿಂದ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ರವಿಕಾಂತ ಪಾಟೀಲ, 2013 ರಲ್ಲಿ ಯಡಿಯೂರಪ್ಪ ನೇತೃತ್ವದ ಕೆಜೆಪಿ ಪಕ್ಷದಿಂದ ಇಂಡಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಬಳಿಕ ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಪಕ್ಷಕ್ಕೆ ಬಂದರೂ 2018 ರಲ್ಲಿ ಟಿಕೇಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.

ಒಂದು ಕಾಲದ ಪಕ್ಷೇತರರಾದರೂ ರಾಜ್ಯದಲ್ಲಿ ಪ್ರಭಾವಿ ಶಾಸಕರಾಗಿದ್ದರೂ ಆನಂತರ ಸತತ ಸೋಲಿನ ಸುಳಿಗೆ ಸಿಲುಕಿದ್ದಾರೆ. ಹೀಗಾಗಿ ರಾಜಕೀಯ ಪುನರ್ಜನ್ಮಕ್ಕಾಗಿ ರಾಜಕೀಯ ಪಕ್ಷಗಳ ಮೊರೆ ಹೋಗುತ್ತಿರುವ ರವಿಕಾಂತ ಪಾಟೀಲ ತಿಂಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದರು. ಇದರ ಬೆನ್ನಲ್ಲೇ ಇದೀಗ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದು, ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next