Advertisement

Ravike Prasanga: ಟ್ರೇಲರ್‌ನಲ್ಲಿ ರವಿಕೆ ಪ್ರಸಂಗ

04:50 PM Jan 21, 2024 | Team Udayavani |

ರವಿಕೆ ಪ್ರಸಂಗ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಫೆ.16ರಂದು ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ನಟ ಧನಂಜಯ್‌ ಟ್ರೇಲರ್‌ ಬಿಡುಗಡೆ ಮಾಡಿದ್ದಾರೆ.

Advertisement

ಸಂತೋಷ್‌ ಕೊಡೆಂಕೇರಿ ಈ ಚಿತ್ರದ ನಿರ್ದೇಶಕರು. “ದೃಷ್ಟಿ ಮೀಡಿಯಾ’ ಪ್ರೊಡಕ್ಷನ್ಸ್‌ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ಗೀತಾ ಭಾರತಿ ಭಟ್‌ ನಟಿಸಿದ್ದಾರೆ. ಈ ಚಿತ್ರಕ್ಕೆ ಪಾವನಾ ಸಂತೋಷ್‌ ಕಥೆ ಸಂಭಾಷಣೆ ಬರೆದಿದ್ದಾರೆ.

ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್‌ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೈಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ “ರವಿಕೆ ಪ್ರಸಂಗ’ದಲ್ಲಿದೆ. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next