ಹೊಸದಿಲ್ಲಿ: ಟೀಮ್ ಇಂಡಿಯಾ ಪ್ರವೇಶಿಸಲು ತುದಿಗಾಲಲ್ಲಿ ನಿಂತಿರುವ ಆಲ್‌ರೌಂಡರ್ ರವೀಂದ್ರ ಜಡೇಜ ಬುಧವಾರ ಫಿಟ್‌ನೆಸ್ ಟೆಸ್ಟ್‌ಗೆ ಒಳಗಾಗಲಿದ್ದಾರೆ. ಇದರಲ್ಲಿ ಉತ್ತೀರ್ಣರಾದರೆ ಮಾತ್ರ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ.
Advertisement
ಏಷ್ಯಾಕಪ್ ಪಂದ್ಯಾವಳಿಯ ವೇಳೆ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದ ರವೀಂದ್ರ ಜಡೇಜ ಸುಮಾರು 6 ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದರು.
ಇದೀಗ ಚೇತರಿಸಿಕೊಂಡು ತಮಿಳುನಾಡು ವಿರುದ್ಧ ರಣಜಿ ಪಂದ್ಯವನ್ನೂ ಆಡಿದರು. ಇಲ್ಲಿ 41.1 ಓವರ್ ಎಸೆದ ಜಡೇಜ 8 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದರು.