Advertisement

ಬೌದ್ಧಿಕ ಹಕ್ಕು ಕಾಯ್ದೆಗಳ ಉಲ್ಲಂಘನೆ ಆರೋಪ : ಪ್ರಸಾದ್‌ ಟ್ವಿಟರ್‌ ಖಾತೆ ತಾತ್ಕಾಲಿಕ ಸ್ಥಗಿತ

09:33 PM Jun 25, 2021 | Team Udayavani |

ನವ ದೆಹಲಿ: ಟ್ವಿಟರ್‌ ಸಂಸ್ಥೆ ಕೇಂದ್ರ ಐಟಿ ಸಚಿವ ರವಿಶಂಕರ್‌ ಪ್ರಸಾದ್‌ ಅವರ ಟ್ವಿಟರ್‌ ಖಾತೆಯನ್ನು ಒಂದು ಗಂಟೆ ಕಾಲ ಸ್ಥಗಿತಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.

Advertisement

ಅಮೆರಿಕದ ಬೌದ್ಧಿಕ ಹಕ್ಕುಗಳ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಿಟರ್‌ ಹೇಳಿದೆ.

“ಇದೊಂದು ನಿರಂಕುಶ ಕ್ರಮವಾಗಿದ್ದು, ಭಾರತದ ಐಟಿ ಕಾನೂನುಗಳ ಸ್ಪಷ್ಟ ಉಲ್ಲಂಘನೆ’ ಎಂದು ಕಿಡಿಕಾರಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಅವರ ಖಾತೆಯನ್ನೂ ಟ್ವಿಟರ್‌ ತಾತ್ಕಾಲಿಕವಾಗಿ ಸಸ್ಪೆಂಡ್‌ ಮಾಡಿದೆ. ಈ ಕುರಿತು ಮಾಹಿತಿ ನೀಡಿದ ತರೂರ್‌, “ರಸ್‌ ಪುಟಿನ್‌ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ’ ಪೋಸ್ಟ್‌ ಮಾಡಿದ್ದಕ್ಕೆ ಟ್ವಿಟರ್‌ ಈ ಕ್ರಮ ಕೈಗೊಂಡಿದೆ. ಆದರೆ, ಐಟಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷನಾಗಿರುವ ಕಾರಣ ನಾನು, ನನ್ನ ಮತ್ತು ಸಚಿವ ಪ್ರಸಾದ್‌ ಅವರ ಖಾತೆ ಸ್ಥಗಿತ ಕುರಿತು ಟ್ವಿಟರ್‌ನಿಂದ ವಿವರಣೆ ಕೇಳಲಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ :ದಕ್ಷಿಣ ಕನ್ನಡ : ವಾರಾಂತ್ಯ ಕರ್ಫ್ಯೂ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next