Advertisement

‘ರಾಯರು ಬಂದರು ಮಾವನ ಮನೆಗೆ…’: ಕನ್ನಡಕ್ಕೆ ಬಂತು ಗುಜರಾತಿ ಸಿನಿಮಾ

06:30 PM Jun 06, 2023 | Team Udayavani |

ಸಿನಿಮಾಗಳು ಭಾಷೆಯ ಗಡಿದಾಟಿವೆ. ಪ್ಯಾನ್‌ ಇಂಡಿಯಾ ಕಾನ್ಸೆಪ್ಟ್ನಡಿ ಬೇರೆ ಬೇರೆ ಭಾಷೆಯ ಸಿನಿಮಾಗಳು ಎಲ್ಲಾ ಕಡೆ ಬಿಡುಗಡೆಯಾಗುತ್ತಿವೆ. ಈಗಾಗಲೇ ಹಿಂದಿ, ತಮಿಳು, ತೆಲುಗು ಡಬ್‌ ಆಗಿ ಕನ್ನಡದಲ್ಲಿ ಬಿಡುಗಡೆಯಾಗುತ್ತಿವೆ. ಅದರಂತೆ ಈಗ ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ.

Advertisement

ವರ ಪಧಾರವೋ ಸಾವಧಾನ ಎಂಬ ಟೈಟಲ್‌ನಡಿ ತಯಾರಾಗಿರುವ ಈ ಸಿನಿಮಾ ಈಗ ಕನ್ನಡದಲ್ಲಿ “ರಾಯರು ಬಂದರು ಮಾವನ ಮನೆಗೆ’ ಎಂಬ ಶೀರ್ಷಿಕೆಯಡಿ ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ. ಜಾಕ್‌ ಮಂಜು ತಮ್ಮದೇ ಶಾಲಿನಿ ಆರ್ಟ್‌ ಬ್ಯಾನರ್‌ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದಾರೆ.

ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್‌ ಚಿತ್ರ ಕೊಟ್ಟಿರುವ ವಿಫ‌ುಲ್‌ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದ್ದು, ಶೈಲೇಶ್‌ ಧಮೇಲಿಯಾ, ಅನಿಲ್‌ ಸಂಘವಿ, ಭರತ್‌ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುರ್ಷಾ, ಕಿಂಜಲ್‌ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್‌ ಬರೋಟ್, ಜಯ್‌ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ.

ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದೆ. ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ, ಕುಟುಂಬ, ಸಂಬಂಧಗಳ ಸುತ್ತ ಇಡೀ ಸಿನಿಮಾ ಸಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next