Advertisement

ಆರ್ ಬಿಐ ಘೋಷಣೆ; ರಿವರ್ಸ್ ರೆಪೋ ದರ ಇಳಿಕೆ-ಸಣ್ಣ ಕೈಗಾರಿಕೆಗಳಿಗೆ ಆರ್ಥಿಕ ಪುನಶ್ಚೇತನ

09:22 AM Apr 18, 2020 | Nagendra Trasi |

ನವದೆಹಲಿ: ಕೋವಿಡ್ 19 ವೈರಸ್ ನಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಗೆ ಹೆಚ್ಚಿನ ತೊಂದರೆಯಾಗದ ರೀತಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ತಿಳಿಸಿದ್ದು, ಈ ನಿಟ್ಟಿನಲ್ಲಿ ರಿವರ್ಸ್ ರೆಪೋ ದರ 25 ಬೇಸಿಸ್ ಪಾಯಿಂಟ್ ಇಳಿಕೆ ಮಾಡಲಾಗಿದ್ದು, ಶೇ.4ರಿಂದ ಶೇ.3.75ಕ್ಕೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬ್ಯಾಂಕ್ ಗಳಿಗೆ ಹೆಚ್ಚಿನ ಧೈರ್ಯ ನೀಡುವ ನಿಟ್ಟಿನಲ್ಲಿ 50 ಸಾವಿರ ಕೋಟಿ ರೂಪಾಯಿ ವಿಶೇಷ ಆರ್ಥಿಕ ನೆರವು ಘೋಷಿಸುತ್ತಿರುವುದಾಗಿ ಹೇಳಿದರು.

50 ಸಾವಿರ ಕೋಟಿ ಹಣಕಾಸಿನ ನೆರವನ್ನು ನ್ಯಾಷನಲ್ ಬ್ಯಾಂಕ್, ನಬಾರ್ಡ್ ಯೋಜನೆಗೆ 25 ಸಾವಿರ ಕೋಟಿ ರೂಪಾಯಿ, ಸಣ್ಣ ಕೈಗಾರಿಕಾ ಅಭಿವೃದ್ದಿ ಬ್ಯಾಂಕ್ ಗೆ, ರಾಷ್ಟ್ರೀಯ ಗೃಹ ನಿರ್ಮಾಣ ಬ್ಯಾಂಕ್ ಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳ ಅವಧಿಯಲ್ಲಿ ಜಾಗತಿಕವಾಗಿ 9 ಟ್ರಿಲಿಯನ್ ಅಮೆರಿಕನ್ ಡಾಲರ್ ನಷ್ಟು ಆರ್ಥಿಕ ನಷ್ಟ ಉಂಟಾಗಿದೆ. ಭಾರತದ ಜಿಡಿಪಿ ಸಹ ಶೇ.1.9ಕ್ಕೆ ಕುಸಿದಿದೆ. ಈ ನಿಟ್ಟಿನಲ್ಲಿ ಭಾರತದ ಆರ್ಥಿಕ ಪುನಶ್ಚೇತನಕ್ಕಾಗಿ ಆರ್ ಬಿಐ ಹಲವು ಯೋಜನೆ ರೂಪಿಸುತ್ತಿದೆ. 2021 -22ರ ಅವಧಿಯಲ್ಲಿ ದೇಶದ ಜಿಡಿಪಿ ಶೇ.7.4ಕ್ಕೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಗವರ್ನರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next