Advertisement

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

01:21 PM Nov 26, 2024 | Team Udayavani |

ಚೆನ್ನೈ: ಆರ್‌ ಬಿಐ ಗವರ್ನರ್‌ (Reserve Bank of India) ಶಕ್ತಿಕಾಂತ್‌ ದಾಸ್‌ ಅವರನ್ನು ಮಂಗಳವಾರ (ನ.26) ಚೆನ್ನೈಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ವಕ್ತಾರರು ನೀಡಿರುವ ಮಾಹಿತಿ ಪ್ರಕಾರ, ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರಿಗೆ ಅಸಿಡಿಟಿ(ಆಮ್ಲೀಯತೆ ಕೊರತೆ) ಸಮಸ್ಯೆಯಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಅವರ ಆರೋಗ್ಯ ಈಗ ಸುಧಾರಿಸಿದ್ದು, ನಾಲ್ಕೈದು ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಮಾಡುವ ಸಾಧ್ಯತೆ ಇದೆ. ಅವರ ಆರೋಗ್ಯದ ವಿಚಾರದಲ್ಲಿ ಕಳವಳಪಡಬೇಕಾದ ಅಗತ್ಯವಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಕ್ತಿಕಾಂತ್‌ ದಾಸ್‌ ಅವರ ಆರೋಗ್ಯದ ಕುರಿತು ಚೆನ್ನೈನ ಅಪೋಲೋ ಆಸ್ಪತ್ರೆ ಮೆಡಿಕಲ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು, ಅಸಿಡಿಟಿ ಸಮಸ್ಯೆಯಿಂದಾಗಿ ಸೋಮವಾರ ರಾತ್ರಿ ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next