ಮುಂಬೈ: ಆರ್ ಬಿಐನ ಹಣಕಾಸು ನೀತಿ ಸಮಿತಿ ಫೆಬ್ರವರಿ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ (ಫೆ. 08) ತಿಳಿಸಿದೆ.
ಇದನ್ನೂ ಓದಿ:NIA Raids: ಮಾವೋವಾದಿಗಳ ಜೊತೆ ಸಂಪರ್ಕ… ಹೈದರಾಬಾದ್‌ನ ಹಲವೆಡೆ ಎನ್‌ಐಎ ಶೋಧ
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಫೆ. 6ರಂದು ಆರಂಭಗೊಂಡಿದ್ದ ಮೂರು ದಿನಗಳ ಕಾಲದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರಿಂದ ಗೃಹ ಹಾಗೂ ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರೆಪೋ ದರದಂತೆ ರಿವರ್ಸ್ ರೆಪೋ ದರ ಕೂಡಾ ಶೇ.3.5ರಷ್ಟಿದ್ದು, ಬ್ಯಾಂಕ್ ಗಳ ಬಡ್ಡಿದರ ಕೂಡಾ ಶೇ.6.75 ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಎಸ್ ಡಿಎಫ್ (ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ) ಶೇ.6.25ರಷ್ಟಿದೆ.