ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ.4ರಂತೆ ಮತ್ತೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿರುವುದಾಗಿ ಗುರುವಾರ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ನ್ಯಾಯಲಯ ತೀರ್ಪಿಗೆ ಎಲ್ಲರೂ ಗೌರವ ಕೊಡೋಣ, ಶಾಂತಿ ಕಾಪಾಡೋಣ: ಸಿಎಂ ಬೊಮ್ಮಾಯಿ
ರಿಸರ್ವ್ ಬ್ಯಾಂಕ್ ಗವರ್ನರ್ (ಆರ್ ಬಿಐ) ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಆರು ಸದಸ್ಯರನ್ನೊಳಗೊಂಡ ಹಣಕಾಸು ನೀತಿ ಸಮಿತಿ (ಎಂಪಿಸಿ)ಯ ಸಭೆಯಲ್ಲಿ ಹಣಕಾಸು ನೀತಿಯನ್ನು ಪ್ರಕಟಿಸಿದೆ.
ರೆಪೋ ದರದಂತೆ ರಿವರ್ಸ್ ರೆಪೋ ದರದಲ್ಲೂ (ಶೇ.3.35) ಯಥಾಸ್ಥಿತಿ ಕಾಯ್ದುಕೊಂಡಿರುವುದಾಗಿ ಆರ್ ಬಿಐ ತಿಳಿಸಿದೆ. ಇದರೊಂದಿಗೆ ಸತತ ಹತ್ತನೇ ಬಾರಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಂತಾಗಿದೆ.
2021-2022ನೇ ಸಾಲಿನ ಆರ್ಥಿಕ ವರ್ಷದಲ್ಲಿ ಶೇ.9.2ರಷ್ಟು ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ಬೆಳವಣಿಗೆಯು ಆರ್ಥಿಕತೆಯನ್ನು ಕೋವಿಡ್ ಸಂದರ್ಭಕ್ಕಿಂತ ಮೊದಲಿದ್ದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದ್ದು, 2022-23ನೇ ಸಾಲಿನಲ್ಲಿ ಶೇ.7.8ರಷ್ಟು ಜಿಡಿಪಿ ಬೆಳವಣಿಗೆ ನಿರೀಕ್ಷಿಸಲಾಗಿದೆ ಎಂದು ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.